ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದ ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ತೀರ್ಮಾನ ಕೈಬಿಡಬೇಕೆಂದು ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಉಕ್ಕು ಸಚಿವ ಜೋತ್ಯಿರಾದಿತ್ಯ ಸಿಂಧಿಯಾರವರ ಜೊತೆ ಮಾತನಾಡಲಾಗಿದೆ. ಕಾರ್ಖಾನೆ ಯಾವುದೇ ಕಾರಣಕ್ಕೂ ಮುಚುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆಯನ್ನು ನೀಡಿದರು.
ಗುತ್ತಿಗೆ ಕಾರ್ಮಿಕರು ಶುಕ್ರವಾರ ಶಿರಾಳಕೊಪ್ಪದಲ್ಲಿ ಮುಖ್ಯಮಂತ್ರಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ವಿಐಎಸ್‌ಎಲ್ ಕಾರ್ಖಾನೆ ಉಳಿಸುವ ನಿಟ್ಟಿನಲ್ಲಿ ನಡೆಸುತ್ತಿರುವ ಹೋರಾಟ ಹಾಗು ಬೆಳವಣಿಗೆ ಕುರಿತು ವಿವರಿಸಿದರು. ಕಾರ್ಖಾನೆಯಲ್ಲಿ ಮುಚ್ಚುವ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅಡಳಿತವರ್ಗ ಈಗಾಗಲೇ ಹಲವಾರು ಇಲಾಖೆಗಳ ಉತ್ಪಾದನೆ ಸ್ಥಗಿತಗೊಳಿಸಿ ಅಲ್ಲಿರುವ ಸಾಮಾಗ್ರಿಗಳನ್ನು ಬೇರೆಡೆಗೆ ಸಾಗಿಸಲು ಸಿದ್ದತೆ ಕೈಗೊಂಡಿದ್ದಾರೆ. ಇದರಿಂದಾಗಿ ಕಾರ್ಮಿಕರು ಆತಂಕಕ್ಕೆ ಒಳಗಾಗಿದ್ದಾರೆಂದು ಅಳಲು ತೋರ್ಪಡಿಸಿಕೊಂಡರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇದಕ್ಕೆ ಪೂರಕವಾಗಿ ಸ್ಪಂದಿಸಿ ಭರವಸೆ ನೀಡಿದರು ಎಂದು ಗುತ್ತಿಗೆ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ರಾಕೇಶ್ ತಿಳಿಸಿದ್ದಾರೆ.
ಉಕ್ಕು ಪ್ರಾಧಿಕಾರ ಮಾ.31ರಿಂದ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತಗೊಳಿಸಲು ಆಡಳಿತ ಮಂಡಳಿಗೆ ಈಗಾಗಲೇ ಸೂಚಿಸಿದೆ ಎನ್ನಲಾಗಿದೆ. ಅಲ್ಲದೆ ಕಾರ್ಖಾನೆ ಮುಚ್ಚುವ ಕುರಿತು ಕೇಂದ್ರ ಸಚಿವರು ಸಹ ಸ್ಪಷ್ಟಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಒಂದೆಡೆ ಕಾರ್ಖಾನೆ ಮುಚ್ಚುವ ಪ್ರಕ್ರಿಯೆ ತೆರೆಮರೆಯಲ್ಲಿ ಹಂತ ಹಂತವಾಗಿ ನಡೆಯುತ್ತಿದ್ದು, ಮತ್ತೊಂದೆಡ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟಕ್ಕೆ ವ್ಯಾಪಕ ಬೆಂಬಲ ಸಹ ವ್ಯಕ್ತವಾಗುತ್ತಿದೆ. ಈ ನಡುವೆ ಚುನಾವಣೆ ಸಹ ಸಮೀಪಿಸುತ್ತಿದ್ದು, ಕಾರ್ಮಿಕರು ಹಾಗು ಕುಟುಂಬ ವರ್ಗದವರಲ್ಲಿ ದಿನದಿಂದ ದಿನಕ್ಕೆ ಆತಂಕ ಹೆಚ್ಚಾಗುತ್ತಿದೆ.
Also read: ಮಾ.18ರಂದು ವಿರಾಜಪೇಟೆ ಸಂಚಾರ ಬದಲಾವಣೆ: ಪರ್ಯಾಯ ಮಾರ್ಗ ವಿವರ ಹೀಗಿದೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post