ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ನಗರದ ವೀರಶೈವ ಸಭಾ ಭವನದಲ್ಲಿ ಶಾಸಕ ಬಿಕೆ ಸಂಗಮೇಶ್ವರ್ ಅವರು ಇಂದು ತಾಲೂಕಿನ 22 ಗ್ರಾಮ ಪಂಚಾಯಿತಿ ಸದಸ್ಯರುಗಳಿಗೆ ಮತ್ತು ನಗರಸಭಾ ಸದಸ್ಯರುಗಳಿಗೆ ಕೋವಿಡ್ 19 ವ್ಯಾಕ್ಸಿನ್ ಹಾಕಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು
ಈ ಸಂದರ್ಭದಲ್ಲಿ ಮಾತನಾಡಿದ ಅವರು. ತಾಲೂಕಿನ ಜನಪ್ರತಿನಿಧಿಗಳಿಗೆ ಚುಚ್ಚುಮದ್ದು ಹಾಕಿಸಿಕೊಳ್ಳುವ ಅಭಿಯಾನಕ್ಕೆ ಚಾಲನೆ ನೀಡಿದ್ದೇನೆ ಚುನಾಯಿತ ಪ್ರತಿನಿಧಿಗಳು ಜನರ ಮಧ್ಯೆ ಇರುವುದರಿಂದ ಇವರು ಬೇಗ ಕರೋನಾ ರೋಗಕ್ಕೆ ತುತ್ತಾಗುತ್ತಾರೆ ಹಿನ್ನೆಲೆಯಲ್ಲಿ ಇವರಿಗೆ ವ್ಯಾಕ್ಸಿನ್ ಹಾಕಿಸಲಾಗುತ್ತದೆ ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ಎಲ್ಲಾ ಜನರಿಗೂ ವ್ಯಾಕ್ಸಿನ್ ಸಿಗುವಂತೆ ಪ್ರಯತ್ನ ಮಾಡುತ್ತೇನೆ ಸಾರ್ವಜನಿಕರು ಹೆದರದೆ ವ್ಯಾಕ್ಸಿನ್ ಹಾಕಿಸಿಕೊಂಡು ಕೊರೋನಾ ನಿಯಂತ್ರಿಸಲು ಸಹಕರಿಸಿ ಎಂದು ಮನವಿ ಮಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post