ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ವಿದ್ಯುತ್ ಕಾಮಗಾರಿ ಸ್ಥಳದಲ್ಲಿನ ಕಾಂಕ್ರೀಟ್ ಕಟ್ಟಡಕ್ಕೆ ದ್ವಿಚಕ್ರ ವಾಹನ ಸವಾರನೋರ್ವ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ.
ಸೇಂಟ್ ಚಾರ್ಲ್ಸ್ ಶಾಲೆಯಲ್ಲಿ ವಾಹನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹೊಸಮನೆ ಓಎಸ್‌ಎಂ ರಸ್ತೆ ನಿವಾಸಿ ಶಶಿಕುಮಾರ್ (45) ಮೃತಪಟ್ಟವರಾಗಿದ್ದು, ಪತ್ನಿ, ಇಬ್ಬರು ಮಕ್ಕಳಿದ್ದಾರೆ.
ನಗರದ ವಿಐಎಸ್‌ಎಲ್ ಡಬ್ಬಲ್ ರಸ್ತೆಯಲ್ಲಿ ವಿದ್ಯುತ್ ಕಂಬ ಅಳವಡಿಸಲು ಕಾಮಗಾರಿ ಕೈಗೊಳ್ಳುತ್ತಿದ್ದು, ಶಶಿಕುಮಾರ್ ರಾತ್ರಿ ಸಿಡಿಲು ಸಹಿತ ಮಳೆಯಾಗುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ಕಳೆದುಕೊಂಡು ಕಾಂಕ್ರೀಟ್ ಕಟ್ಟಡಕ್ಕೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ತೀವ್ರ ಗಾಯಗೊಂಡ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Also read: ಅಯೋಧ್ಯೆಯಲ್ಲಿ ಶ್ರೀರಾಮ ಪ್ರತಿಷ್ಠಾಪನಾ ಸಮಾರಂಭ ಹಿನ್ನೆಲೆ: ವಿವಿಧ ಸ್ಪರ್ಧಾ ಕಾರ್ಯಕ್ರಮ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post