ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ತಾಲೂಕಿನ ಪುರಾಣ ಪ್ರಸಿದ್ದ ಸುಣ್ಣದಹಳ್ಳಿ ವೀರಾಂಜನೇಯ ಸ್ವಾಮಿ ರಥೋತ್ಸವ ಅದ್ದೂರಿಯಾಗಿ ಜರುಗಿತು.
ಭಕ್ತಾಧಿಗಳು ಸ್ವಾಮಿಗೆ ಜೈಕಾರ ಹಾಕುವ ಮೂಲಕ ಸಂಭ್ರಮಿಸಿದರು. ಮಧ್ಯಾಹ್ನ 12 ಗಂಟೆಗೆ ದೇವಸ್ಥಾನ ಆವರಣದಿಂದ ಆರಂಭಗೊಂಡ ರಥೋತ್ಸವ ಅಗಸೆ ಬಾಗಿಲಿನವರೆಗೂ ಸಾಗಿತು. ಭಜನಾ ತಂಡಗಳಿಂದ ಭಜನೆ ನಡೆಯಿತು.
ದೇವಸ್ಥಾನದಲ್ಲಿ ಮೂಲ ವಿಗ್ರಹಕ್ಕೆ ವಿಶೇಷ ಪೂಜೆ, ಅಲಂಕಾರ ಕೈಗೊಳ್ಳಲಾಗಿತ್ತು. ಕೋವಿಡ್-19 ಭೀತಿ ನಡುವೆಯೂ ನಗರ ಹಾಗೂ ಗ್ರಾಮಾಂತರ ಭಾಗಗಳಿಂದ ಭಕ್ತಾಧಿಗಳು ಆಗಮಿಸಿ ಸ್ವಾಮಿಗೆ ಪೂಜೆ ಸಲ್ಲಿಸಿದರು. ಭಕ್ತಾಧಿಗಳಿಗೆ ಪಾನಕ, ಮಜ್ಜಿಗೆ ವಿತರಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post