ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ #VISL ಆಜಾದಿ ಕ ಅಮೃತ್ ಮಹೋತ್ಸವ #Azadi ka amruth mahothsav ಅಂಗವಾಗಿ 3ನೇ ಬಾರಿಗೆ ಕಾರ್ಖಾನೆಯ ಕಾರ್ಮಿಕರಿಗೆ ಹೃದಯ ತಪಾಸಣಾ ಶಿಬಿರ #Heart checkup camp ಆಯೋಜಿಸಲಾಗಿತ್ತು.
ಶಿವಮೊಗ್ಗ ಸಹ್ಯಾದ್ರಿ ನಾರಾಯಣ ಹೃದಯಾಲಯದ ವೈದ್ಯರು ಮತ್ತು ಸಿಬ್ಬಂದಿಗಳ ಸಹಕಾರದೊಂದಿಗೆ ಕಾರ್ಖಾನೆಯ ಮಾನವ ಸಂಪನ್ಮೂಲ, ವಿಐಎಸ್‌ಎಲ್ ಆಸ್ಪತ್ರೆ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಶಿಬಿರದಲ್ಲಿ 30 ಮಹಿಳಾ ಕಾರ್ಮಿಕರು ಸೇರಿದಂತೆ ಒಟ್ಟು 285 ಕಾರ್ಮಿಕರು ಪಾಲ್ಗೊಂಡಿದ್ದರು. ಶಿಬಿರದಲ್ಲಿ ರಕ್ತದೊತ್ತಡ, ಮಧುಮೇಹ ಮತ್ತು ಆಮ್ಲಜನಕ ಶುದ್ಧತ್ವ, ಎಕೋ ಮತ್ತು ಇಸಿಜಿ ತಪಾಸಣೆ ನಡೆಸಲಾಯಿತು.
ಹೃದಯ ರೋಗ ತಜ್ಞರಾದ ಡಾ. ಶರತ್ ಸಂಗಣ್ಣ ಗೌಡರ್ ಹಾಗೂ ಡಾ. ಎಸ್.ವಿ. ಸಿದ್ಧಾರ್ಥ್ ಮತ್ತು ಕಾರ್ಖಾನೆಯ ವಿವಿಧ ಇಲಾಖೆಗಳ ಅಧಿಕಾರಿಗಳು, ಕಾಯಂ ಹಾಗು ಗುತ್ತಿಗೆ ಕಾರ್ಮಿಕರ ಮತ್ತು ಅಧಿಕಾರಿಗಳ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post