ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ವಿಶ್ವ ಛಾಯಾಗ್ರಾಹಕ ದಿನಾಚರಣೆ ಪ್ರಯುಕ್ತ ಹಳೇನಗರದ ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಜರುಗಿತು.
ತಾಲೂಕು ಛಾಯಾಗ್ರಾಹಕರ ಸಂಘ ಮತ್ತು ಛಾಯಾಗ್ರಾಹಕರ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ವತಿಯಿಂದ ಶಿವಮೊಗ್ಗ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ಸುಮಾರು 250ಕ್ಕೂ ಹೆಚ್ಚು ಮಂದಿ ಪಾಲ್ಗೊಂಡು ಶಿಬಿರದ ಸದುಪಯೋಗ ಪಡೆದುಕೊಂಡರು.
ಶಿಬಿರದಲ್ಲಿ ಇ.ಸಿ.ಜಿ.ಯೊಂದಿಗೆ ಹೃದಯ, ಕಿಡ್ನಿ, ದಂತ, ಕಣ್ಣು, ಕಿವಿ, ಇ.ಎನ್.ಟಿ, ಮೂಳೆ, ನರರೋಗ, ಚರ್ಮರೋಗ, ಸಕ್ಕರೆ ಖಾಯಿಲೆ, ಮಕ್ಕಳ ಮತ್ತು ಸ್ತ್ರೀಯರ ಖಾಯಿಲೆಗಳು ಹಾಗೂ ಜನರಲ್ ಮೆಡಿಸಿನ್, ಜನರಲ್ ಸರ್ಜರಿ ಇತರೆ ರೋಗಗಳಿಗೆ ಉಚಿತ ತಪಾಸಣೆ ಮತ್ತು ಚಿಕಿತ್ಸೆ ನೀಡಲಾಯಿತು.
Also read: ಸೊರಬ: ಸಂಭ್ರಮ – ಸಡಗರದ ನಾಗರಪಂಚಮಿ ಆಚರಣೆ
18ಕ್ಕೂ ಹೆಚ್ಚು ಮಂದಿ ರಕ್ತದಾನ :
ರಕ್ತದಾನ ಶಿಬಿರ ಸಹ ನಡೆಯಿತು, ಸುಮಾರು 18ಕ್ಕೂ ಮಂದಿ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ನೆರವೇರಿಸಿದರು. ದಾನಿಗಳಿಗೆ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದವತಿಯಿಂದ ಉಚಿತವಾಗಿ ಒಂದು ವರ್ಷ ಅವಧಿಯ ಹೆಲ್ತ್‌ಕಾರ್ಡ್ (ಕುಟುಂಬದ ಸದಸ್ಯರಿಗೆ) ನೀಡಲಾಯಿತು.
ಶಿವಮೊಗ್ಗ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಆಡಳಿತ ಮೇಲ್ವಿಚಾರಕ ಡಾ. ಶಿವಮೂರ್ತಿ, ತಜ್ಞ ವೈದ್ಯರಾದ ಡಾ. ಚಂದ್ರಶೇಖರ್, ಡಾ. ಗುರುರಾಜ್, ತಾಲೂಕು ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಸಂಜೀವರಾವ್ ಸಿಂಧ್ಯಾ, ಗೌರವಾಧ್ಯಕ್ಷ ಅರುಣ್‌ಕುಮಾರ್, ಉಪಾಧ್ಯಕ್ಷ ಮಹಮದ್ ವಜೀರ್ (ಮುನ್ನಾ), ಖಜಾಂಚಿ ಸತೀಶ್‌ಕುಮಾರ್, ಸಹಕಾರ್ಯದರ್ಶಿ ಕುಮಾರ್ ಹಾಗು ಕಾರ್ಯಕಾರಿ ಸಮಿತಿ ಸದಸ್ಯರು, ಛಾಯಾಗ್ರಾಹಕರ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ಅಧ್ಯಕ್ಷ ಮಂಜುನಾಥ್ (ಮೇಘ) ಹಾಗು ಮಹಮ್ಮದ್ ಮತ್ತು ಕಾಂತರಾಜ್ ಸೇರಿದಂತೆ ಛಾಯಾಗ್ರಾಹಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post