ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಇಲ್ಲಿನ ಭೂತನಗುಡಿ ಬಡಾವಣೆಯ ಯುವಕನೋರ್ವನಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು, ಪರಿಣಾಮವಾಗಿ ಈ ಪ್ರದೇಶದಲ್ಲಿ ಆತಂಕ ಸೃಷ್ಠಿಯಾಗಿದೆ.
ನಗರದ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ನಿರ್ವಹಿಸುವ 28 ವರ್ಷದ ಯುವಕನಲ್ಲಿ ಕೊರೋನಾ ಪಾಸಿಟಿವ್ ಇಂದು ದೃಢಪಟ್ಟಿದ್ದು, ಈತನ ಟ್ರಾವೆಲ್ ಹಿಸ್ಟರಿ/ಸೋಂಕಿನ ಸಂಪರ್ಕವನ್ನು ಪತ್ತೆ ಮಾಡಲಾಗುತ್ತಿದೆ.
ಈತ ವಾಸಿಸುವ ಭೂತನಗುಡಿಯಲ್ಲಿನ ರಸ್ತೆಯನ್ನು ಸೀಲ್ ಡೌನ್ ಮಾಡಲಾಗುತ್ತಿದ್ದು, ಸ್ಯಾನಿಟೈಸ್ ಸಹ ಮಾಡಲಾಗುತ್ತಿದೆ. ನಗರಸಭೆ ಆಯುಕ್ತ ಮನೋಹರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post