ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಕೊರೋನಾ ಲಸಿಕೆ ಕುರಿತು ಸೂಕ್ತ ಮಾಹಿತಿ ನೀಡುವ ಮೂಲಕ ಸಾರ್ವಜನಿಕರಲ್ಲಿ ಉಂಟಾಗಿರುವ ಗೊಂದಲ ಬಗೆಹರಿಸುವಂತೆ ಜನತಾದಳ (ಸಂಯುಕ್ತ) ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಕೊರೋನಾ ಲಸಿಕೆ ನೀಡುವ ಸಂಬಂಧ ಉಂಟಾಗಿರುವ ಮಾಹಿತಿ ಕೊರತೆಯಿಂದಾಗಿ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಲಸಿಕಾ ಕೇಂದ್ರದಲ್ಲಿ ಪ್ರತಿದಿನ ಲಭ್ಯವಿರುವ ಲಸಿಕೆ ಪ್ರಮಾಣ, ಲಸಿಕೆ ನೀಡುವ ದಿನ, 2ನೇ ಡೋಸ್ ನೀಡುವ ದಿನ, ನಿಗದಿಪಡಿಸಲಾಗಿರುವ ವಯಸ್ಸಿನ ಮಾನದಂಡ ಇತ್ಯಾದಿ ಮಾಹಿತಿಯನ್ನು ವಿವರವಾಗಿ ತಿಳಿಯುವಂತೆ ಪ್ರಕಟಿಸು ಮೂಲಕ ಗೊಂದಲ ಬಗೆಹರಿಸುವಂತೆ ಒತ್ತಾಯಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post