ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್‌ಗೆ ಲಾರಿ ಡಿಕ್ಕಿಯಾದ ಪರಿಣಾಮ, ದಂಪತಿ ಲಾರಿಯ ಹಿಂಬದಿಯ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ ಘಟನೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಎಚ್.ಕೆ. ಜಂಕ್ಷನ್ ಬಳಿ ಅಪಘಾತ ಸಂಭವಿಸಿದ್ದು, ಮೃತರನ್ನು ತರೀಕೆರೆ ತಾಲ್ಲೂಕಿನ ಬರಗೇನಹಳ್ಳಿ ಗೌಳಿಕ್ಯಾಂಪ್ ನಿವಾಸಿ ಬಾಬು (30) ಮತ್ತು ಅವರ ಪತ್ನಿ ಎಂದು ಗುರುತಿಸಲಾಗಿದೆ.
ಶಿವಮೊಗ್ಗದ ಹೋಟೆಲ್ ಒಂದರಲ್ಲಿ ಕೆಲಸ ಮುಗಿಸಿಕೊಂಡು ದಂಪತಿ ಬೈಕ್‌ನಲ್ಲಿ ತರೀಕೆರೆ ಕಡೆಗೆ ತೆರಳುತ್ತಿದ್ದರು. ಈ ವೇಳೆ ಶಿವಮೊಗ್ಗದಿಂದ ತರೀಕೆರೆ ಮಾರ್ಗವಾಗಿ ಜೋಳ ತುಂಬಿಕೊಂಡು ಹೋಗುತ್ತಿದ್ದ ಲಾರಿಯು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ದಂಪತಿ ಲಾರಿಯ ಹಿಂಬದಿಯ ಚಕ್ರದಡಿಗೆ ಸಿಲುಕಿದ್ದಾರೆ. ಬಾಬು ಅವರು ಸ್ಥಳದಲ್ಲೇ ಮೃತಪಟ್ಟರೆ, ತೀವ್ರವಾಗಿ ಗಾಯಗೊಂಡಿದ್ದ ಅವರ ಪತ್ನಿಯನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಭದ್ರಾವತಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















