ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿದ್ದ ಕೋವಿಡ್ ಲಸಿಕಾ ಕೇಂದ್ರವನ್ನು ಹಳೆನಗರದ ಸಂಚಿ ಹೊನ್ನಮ್ಮ ಶಾಲೆಗೆ ಸ್ಥಾಳಾಂತರಿಸಿದ ಮೊದಲ ದಿನವೇ ಲಸಿಕೆಗಾಗಿ ಭಾರೀ ಬೇಡಿಕೆ ಕಂಡುಬಂದಿದೆ.

ತಾಲೂಕು ಸಾರ್ವಜನಿಕ ಆಸ್ಪತ್ರೆಯನ್ನು ತೀವ್ರ ರೋಗ ಲಕ್ಷಣಗಳಿರುವ ಕೋವಿಡ್ ಸೋಂಕಿತರಿಗಾಗಿ ಹಾಗೂ ತುರ್ತು ಚಿಕಿತ್ಸೆಗಾಗಿ ಮಾತ್ರ ಮೀಸಲಿಟ್ಟ ಹಿನ್ನೆಲೆಯಲ್ಲಿ ಲಸಿಕಾ ಕೇಂದ್ರವನ್ನು ಈ ಶಾಲೆಗೆ ಸ್ಥಳಾಂತರಿಸಲಾಗಿದೆ.

ಸಾರ್ವಜನಿಕ ಆಸ್ಪತ್ರೆಯಲ್ಲಿ ಲಸಿಕೆ ಪಡೆಯಲು ಆಗಮಿಸುತ್ತಿದ್ದವರ ಸಂಖ್ಯೆಗೆ ಹೋಲಿಕೆ ಮಾಡಿದರೆ ಇಲ್ಲ ದುಪ್ಪಟ್ಟಾಗಿರುವುದು ಕಂಡು ಬಂದಿದೆ.

ಇಂದು ಸುಮಾರು 200 ಡೋಸ್ ಲಸಿಕೆ ಸರಬರಾಜಾಗಿದ್ದರೆ, ಲಸಿಕೆಗಾಗಿ ಸಾಲುಗಟ್ಟಿ ನಿಂತವರ ಸಂಖ್ಯೆ 400ಕ್ಕೂ ಹೆಚ್ಚು ಆದರೆ, ಮೊದಲೇ ನೋಂದಣಿ ಮಾಡಿಕೊಂಡವರಿಗೆ ಹಾಗೂ ಎರಡನೆಯ ಡೋಸ್ ಪಡೆಯುವವರಿಗೆ ಆದ್ಯತೆ ನೀಡಲಾಗಿತ್ತು. ಮೊದಲ ಮಹಡಿಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಹಾಗೂ ನೆಲ ಮಹಡಿಯಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















