ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಹಣಕಾಸಿನ ವಿಚಾರದಲ್ಲಿ ಹುಟ್ಟಿಕೊಂಡ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ.
ಭದ್ರಾವತಿ ತಾಲೂಕಿನ ರಂಗನಾಥಪುರ ಗ್ರಾಮದಲ್ಲಿ ಸಂಭವಿಸಿದ ಈ ಜಗಳದಲ್ಲಿ ವೆಂಕಟೇಶ್ ಎಂಬವರ ಕೊಲೆಯಾಗಿದೆ.
ಹಣಕಾಸಿನ ವಿಚಾರದಲ್ಲಿ ಗಲಾಟೆ ಶುರುವಾಗಿ ಪ್ರದೀಪ ಮತ್ತು ಪ್ರೇಮ ಎಂಬವರು ತನ್ನ ಗಂಡನ ಮೇಲೆ ದೊಣ್ಣೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾರೆ ಎಂದು ಮೃತನ ಪತ್ನಿ ನಾಗರತ್ನ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಗಾಯಾಳು ವೆಂಕಟೇಶ್(36) ನನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯ ಲಾಯಿತಾದರೂ, ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಹೇಳಲಾಗಿದೆ.
ಗ್ರಾಮಾಂತರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post