ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಡಾ. ರಾಜ್‌ಕುಮಾರ್ ಅವರ ಪುತ್ಥಳಿ ಕುರಿತು ತೀರಾ ಕೀಳುಮಟ್ಟದ ಭಾಷೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವ ಕಾಂಗ್ರೆಸ್ ಶಾಸಕ ಹ್ಯಾರಿಸ್ ವಿರುದ್ಧ ಕರ್ನಾಟಕ ಜನಸೈನ್ಯ ಸಂಘಟನೆ ಇಂದು ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿತು.
ಡಾ. ರಾಜ್‌ಕುಮಾರ್ ಅಭಿಮಾನಿಗಳಿಗೆ ತೀವ್ರ ನೋವುಂಟಾಗಿದ್ದು, ಕನ್ನಡಿಗರ ಅಪಮಾನ ಮಾಡುವಂತಹ ಹೇಳಿಕೆ ಕೊಡುತ್ತ ಸಮಾಜದಲ್ಲಿ ಗಲಭೆ ಸೃಷ್ಟಿಸುತ್ತಿರುವ ಶಾಸಕ ಹ್ಯಾರಿಸ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಹಾಗೂ ಅವರ ಶಾಸಕ ಸ್ಥಾನವನ್ನು ರದ್ದು ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಮಂಜುನಾಥ್, ಉಸ್ತುವಾರಿ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್, ಗೌರವಾಧ್ಯಕ್ಷ ಅನಿಲ್ (ಬಾಬು), ತಾಲೂಕು ಅಧ್ಯಕ್ಷ ರಾಜು, ಕಾರ್ಮಿಕ ಘಟಕಾಧ್ಯಕ್ಷ ಪರಮೇಶ್, ಗ್ರಾಮಾಂತರ ಅಧ್ಯಕ್ಷ ಪ್ರದೀಪ್, ಜಿಲ್ಲಾ ಕಾರ್ಯದರ್ಶಿ ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post