ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ಅಡಿಯಲ್ಲಿರುವ ಸ್ವಸಹಾಯ ಸಂಘಗಳ ಸದಸ್ಯರಿಗೆ ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ಲಾಭಾಂಶ ವಿತರಣಾ ಕಾರ್ಯಕ್ರಮ ನಡೆಯಿತು.
ತಾಲೂಕು ಸಂಘದ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಶಾಸಕ ಸಂಗಮೇಶ್ವರ್ ಮಾತನಾಡಿ, ಕೊರೋನಾ ಸಂಕಷ್ಠಕಾಲದಲ್ಲಿ ಸಂಘದ ಸದಸ್ಯರುಗಳಿಗೆ ಆರ್ಥಿಕವಾಗಿ ಅನುಕೂಲವಾಗಲೆಂಬ ದೃಷ್ಠಿಯಿಂದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಡೆ ಅವರ ಆಶಯದಂತೆ ತಾಲೂಕು ಶಾಖೆಗೆ ಬಂದಂತಹ ೨.೯೨ಲಕ್ಷ ಲಾಭಾಂಶದ ಹಣವನ್ನು ಸಂಘದ ೧೭,೭೦೭ ಸದಸ್ಯರಿಗೆ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸಂಘದ ವಲಂiiದ ಮೇಲ್ವಿಚಾರಕರಾದ ಎನ್. ಪ್ರಶಾಂತ್, ಸೇವಾ ಪ್ರತಿನಿಧಿಗಳಾದ ರಾಜೇಶ್ವರಿ, ಶೃತಿ, ಶಾರದಾ ಮುಂತಾದವರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post