ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಭದ್ರಾ ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ ಅವರ ನೇತೃತ್ವದಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ನಿಧಿ ಸಮರ್ಪಣೆ ಮಾಡಲು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಸಹ ಕಾರ್ಯವಾಹಕ ಪಟ್ಟಾಭಿರಾಮ್ ಅವರು ಪ್ರಾಧಿಕಾರದ ಆಹ್ವಾನ ಮೇರೆಗೆ ಕಚೇರಿಗೆ ಭೇಟಿ ನೀಡಿ ನಿಧಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಮ ಮಂದಿರದ ಸುದೀರ್ಘ 500 ವರ್ಷಗಳ ಹೋರಾಟದ ಕುರಿತು ಹಾಗೂ ಭವ್ಯ ರಾಮ ಮಂದಿರದ ಕಟ್ಟಡದ ವಿನ್ಯಾಸ ಮತ್ತು ರಾಮನ ಜನ್ಮ ಸ್ಥಳವಾದ ಅಯೋಧ್ಯೆಯ ಭವ್ಯ ಇತಿಹಾಸವನ್ನು ವಿವರಿಸಿದರು.
ಈ ಸಂದರ್ಭದಲ್ಲಿ ಆಡಳಿತಾಧಿಕಾರಿಗಳಾದ ಕೃಷ್ಣ ಮೂರ್ತಿ, ಕಾರ್ಯಪಾಲಕ ಅಭಿಯಂತರರಾದ ಮೂಡಲ ಗಿರಿ, ಕೃಷಿ ವಿಭಾಗದ ಜಂಟಿ ನಿರ್ದೇಶಕ ಅರುಣ್, ಸಹಕಾರ ವಿಭಾಗದ ಜಂಟಿ ನಿರ್ದೇಶಕ ನಯನ ಹಾಗೂ ಎಲ್ಲಾ ಅಧಿಕಾರಿ ವೃಂದದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post