ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದ ನ್ಯೂಟೌನ್ ಸರ್ಕಾರಿ ಬಾಲಿಕಾ ಪ್ರೌಢಶಾಲೆಯಲ್ಲಿ 16 ರಿಂದ 29 ವರ್ಷದೊಳಗಿನ ಶಾಲೆಯಿಂದ ಹೊರಗುಳಿದ, ಶಾಲೆ ಬಿಟ್ಟ ಮತ್ತು ಶಿಕ್ಷಣವನ್ನು ಅರ್ಧದಲ್ಲೇ ಮೊ ಟಕುಗೊಳಿಸಿದ ಹೆಣ್ಣುಮಕ್ಕಳಿಗೆ ಕೌಶಲ್ಯಾಧಾರಿತ ಉಚಿತ ಡೇಟಾ ಎಂಟ್ರಿ ಮತ್ತು ಬ್ಯೂಟಿಷಿಯನ್ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಲಾಯಿತು.

ಸರ್ವ ಶಿಕ್ಷಣ ಕರ್ನಾಟಕ (SSK) ಶಿವಮೊಗ್ಗದ ಡಿವೈಪಿಸಿ ಗಣಪತಿ, ಡಿವೈಪಿಸಿ ಉಮಾಮಹೇಶ್ವರ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್. ಸೋಮಶೇಖರಯ್ಯ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನಾಚಾರಣೆ ಸುದಿನದಂದು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಎಸ್‌ಡಿಎಮ್‌ಸಿ ಅಧ್ಯಕ್ಷರು, ತರಬೇತಿಗಾಗಿ ಆಗಮಿಸಿದ ಸಾರ್ವಜನಿಕರು, ಅಭ್ಯರ್ಥಿಗಳು ಹಾಜರಿದ್ದರು. ಕಾರ್ಯಕ್ರಮದ ಶಾಲೆಯ ಉಪಪ್ರಾಚಾರ್ಯರಾದ ಟಿ.ಎಸ್. ಸುಮನ ಅಧ್ಯಕ್ಷತೆ ವಹಿಸಿದ್ದರು ಮತ್ತು ಇಂಥಾ ಸರ್ಟಿಫಿಕೇಟ್ ಸಹಿತ ಉಚಿತ ತರಬೇತಿ ಯನ್ನು ಅಗತ್ಯವಿರುವ ಹೆಣ್ಣುಮಕ್ಕಳು ಪಡೆದುಕೊಂಡು ಬ್ಯೂಟಿ ಪಾರ್ಲರ್ ಮತ್ತು ಐಟಿ ಹಬ್ ಗಳಲ್ಲಿ ಡೇಟಾ ಎಂಟ್ರಿ ಆಪರೇಟರ್ಸ್ ಆಗಿ ಸ್ವಾವಲಂಬಿಯಾಗಿ ಬದುಕಬಹುದು . ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಸೇರಬೇಕೆಂದು ಕರೆ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















