ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದ ಹೊಸಮನೆ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವನನ್ನು ಬಂಧಿಸಿ ಆರೋಪಿಯಿಂದ 150 ಗ್ರಾಂ ಒಣ ಗಾಂಜಾ ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಮುತ್ಯಾನ್ ಸಾಬ್ (66) ಬಂಧಿತ ಆರೋಪಿಯಾಗಿದ್ದು, ನಗರದ ಹೊಸಮನೆ ಬಡಾವಣೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸ್ಥಳೀಯ ಪೊಲೀಸರು ದಾಳಿ ನಡೆಸಿ ಅಂದಾಜು 6000ರೂ. ಮೌಲ್ಯದ 150 ಗ್ರಾಂ ಒಣ ಗಾಂಜಾ ಹಾಗೂ 530ರೂ. ನಗದು ವಶಪಡಿಸಿಕೊಂಡು, ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.












Discussion about this post