ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಪ್ರಸ್ತುತ ಸನ್ನಿವೇಶದಲ್ಲಿ ಇಂಗ್ಲೀಷ್ ಭಾಷೆ ಬಹುಮುಖ್ಯವಾದದ್ದು, ಇಂಗ್ಲೀಷ್ ಕಲಿಯುವುದರಿಂದ ಬಹಳಷ್ಟು ಪ್ರಯೋಜನ ಇವೆ ಎಂದು ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಸಿದ್ಧಬಸಪ್ಪ ಅಭಿಪ್ರಾಯಪಟ್ಟರು.
ನಗರದ ವಿಶ್ವೇಶ್ವರಯ್ಯ ಪ್ರೌಢ ಶಾಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಇಂಗ್ಲೀಷ್ ಕಲಿಕಾ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಲಿಕಾ ಚೇತರಿಕೆಯಲ್ಲಿ ಕಾರ್ಯಕ್ರಮದಲ್ಲಿ ಆರಂಭದಲ್ಲಿ ಇದ್ದ ಎಲ್ಲಾ ತೊಡಕುಗಳು ಈಗ ಪರಿಹಾರ ಆಗಿವೆ. ಇಂಗ್ಲೀಷ್ ಕಲಿಕಾ ಚೇತರಿಕೆಯಲ್ಲಿ ಇರುವ ಎಲ್ಲಾ ಚಟುವಟಿಕೆಗಳು ಪಠ್ಯ ಪೂರಕವಾಗಿವೆ. ಒಟ್ಟಾರೆ ಕಲಿಕಾ ನ್ಯೂನತೆಗಳು ಇದರಿಂದ ಮಾಯವಾಗಿ ವಿಫ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ಮೂಡುತ್ತದೆ ಎಂದರು.
ಕ್ಷೇತ್ರ ಸಂಪನ್ಮೂಲ ವ್ಯಕ್ತಿ ನವೀದ್ ಅಹಮದ್ ಪರ್ವೀಜ್ ಇವರು ಕಾರ್ಯಕ್ರಮದ ಶಿಸ್ತು ಬದ್ಧತೆಯನ್ನು ಶ್ಲಾಘಿಸಿ ಸೂಕ್ತ ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ಬಿಈಓ ಎ. ಕೆ. ನಾಗೇಂದ್ರಪ್ಪ, ಸಂಪನ್ಮೂಲ ವ್ಯಕ್ತಿಗಳಾದ ಎಂ. ದಿವಾಕರ್, ಜಯಕುಮಾರ್, ಇಮ್ತಿಯಾಜ್, ಪ್ರಕಾಶ್, ಅಶ್ವಿನಿ ಜಾಧವ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post