ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಪರಿಸರವನ್ನು ಮಾಲಿನ್ಯದಿಂದ ಮುಕ್ತವಾಗಿಡುವಲ್ಲಿ ನಾವು ಪ್ರತಿಯೊಬ್ಬರೂ ಸಕ್ರೀಯ ಪಾತ್ರವನ್ನು ವಹಿಸಿ, ಮುಂದಿನ ಪೀಳಿಗೆಗೆ ಭೂಮಿಯನ್ನು ಸುರಕ್ಷಿತವಾಗಿಡಬೇಕೆಂದು ಕಾರ್ಯಪಾಲಕ ನಿರ್ದೇಶಕ ಬಿ.ಎಲ್. ಚಂದ್ವಾನಿ ಹೇಳಿದರು.
ವಿಐಎಸ್ಎಲ್ನಲ್ಲಿ VISL ಆಯೋಜಿಸಲಾಗಿದ್ದ ವಿಶ್ವಪರಿಸರ ದಿನಾಚರಣೆಯಲ್ಲಿ ಸರ್. ಎಂ.ವಿಶ್ವೇಶ್ವರಾಯನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿ, ಪರಿಸರದ ಮೇಲೆ ಪ್ಲಾಸ್ಟಿಕ್ ಮಾಲಿನ್ಯದ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು
ಪ್ಲಾಸ್ಟಿಕ್ ಮಾಲಿನ್ಯವನ್ನು ತೊಡೆದುಹಾಕಿ – ಪ್ಲಾಸ್ಟಿಕ್ ಮಾಲಿನ್ಯಕ್ಕೆ ಪರಿಹಾರಗಳು ಎಂಬ ಧ್ಯೇಯದೊಂದಿಗೆ ಆಚರಿಸಲಾದ ಕಾರ್ಯಕ್ರಮದಲ್ಲಿ ಹಿರಿಯ ಪ್ರಬಂಧಕರು (ಹಣಕಾಸು) ಉನ್ನಿಕೃಷ್ಣನ್ ಪ್ರಾರ್ಥಿಸಿ, ಮಹಾ ಪ್ರಬಂಧಕರು (ಪರಿಸರ ನಿರ್ವಹಣೆ ಮತ್ತು ಸಿವಿಲ್ ಇಂಜಿನಿಯರಿಂಗ್ -ಸ್ಥಾವರ) ಡಿ. ಲೋಕೇಶ್ವರ್, ವಿಶ್ವ ಪರಿಸರ ದಿನದ ಇತಿಹಾಸದ ಕುರಿತು ಸಂಕ್ಷಿಪ್ತ ಪರಿಚಯವನ್ನು ನೀಡಿದರು ಮತ್ತು ಸಭೆಯನ್ನು ಸ್ವಾಗತಿಸಿದರು. ಮಹಾಪ್ರಬಂಧಕರು (ನಗರಾಡಳಿತ) ಮೋಹನ್ರಾಜ್ ಶೆಟ್ಟಿ ಕಾರ್ಪೊರೇಟ್ ಪರಿಸರ ನೀತಿಯನ್ನು ಓದಿದರು. ಸಹಾಯಕ ಮಹಾಪ್ರಬಂಧಕರು (ವಿಜೆಲೆನ್ಸ್) ಎಲ್. ಕುತಲನಾಥನ್ ವಂದನಾರ್ಪಣೆ ಸಲ್ಲಿಸಿದರು.
ಸಮಾರಂಭದಲ್ಲಿ ಮುಖ್ಯ ಮಹಾ ಪ್ರಬಂಧಕರು (ಸ್ಥಾವರ), ವಿಐಎಸ್ಎಲ್ ಕಾರ್ಮಿಕರ ಸಂಘ ಮತ್ತು ಅಧಿಕಾರಿಗಳ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರುಗಳು, ಹಿರಿಯ ಅಧಿಕಾರಿಗಳು, ನೌಕರರು ಮತ್ತು ಗುತ್ತಿಗೆ ನೌಕರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post