ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿಸುವ ನಿಟ್ಟಿನಲ್ಲಿ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟದಲ್ಲಿ ಪಕ್ಷ ರಾಜಕಾರಣ ಮಾಡುವುದಿಲ್ಲ. ಹೋರಾಟ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಹಕಾರ ನೀಡುವ ಜೊತೆಗೆ ಕ್ಷೇತ್ರದ ಸಮಸ್ತ ನಾಗರೀಕರು ಸಹ ಫೆ.24ರಂದು ಹಮ್ಮಿಕೊಳ್ಳಲಾಗಿರುವ ಭದ್ರಾವತಿ ಬಂದ್ ಹೋರಾಟ ಬೆಂಬಲಿಸುವಂತೆ ಮನವಿ ಮಾಡುವುದಾಗಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಾರದ ಅಪ್ಪಾಜಿ Sharada Appaji ಹೇಳಿದರು.
ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಾಜಿ ಶಾಸಕ ದಿವಂಗತ ಎಂ.ಜೆ. ಅಪ್ಪಾಜಿಯವರು ಕಾರ್ಮಿಕನಾಗಿ ದುಡಿಯುವ ಜೊತೆಗೆ ಕಾರ್ಮಿಕರ ಪರವಾಗಿ ನಿರಂತರವಾಗಿ ಹೋರಾಟ ನಡೆಸಿಕೊಂಡು ಬಂದಿದ್ದರು. ಒಬ್ಬ ಕಾರ್ಮಿಕನ ಹೆಂಡತಿಯಾಗಿರುವ ನಾನು ಸಹ ಈ ಕಾರ್ಖಾನೆ ಉಳಿಯಬೇಕೆಂಬ ಹೋರಾಟದಲ್ಲಿ ತೊಡಗಿಸಿಕೊಂಡಿದ್ದೇನೆ. ಪಕ್ಷದ ವತಿಯಿಂದ ಸಹ ಹೋರಾಟ ನಡೆಸಲಾಗುತ್ತಿದ್ದು, ಗುತ್ತಿಗೆ ಕಾರ್ಮಿಕರ ಹೋರಾಟಕ್ಕೂ ಸಂಪೂರ್ಣ ಬೆಂಬಲ ನೀಡಿದ್ದೇವೆ. ವಿಐಎಸ್‌ಎಲ್ ಕಾರ್ಖಾನೆ ವಿಚಾರದಲ್ಲಿ ಯಾವುದೇ ರೀತಿ ರಾಜಕಾರಣ ಮಾಡುವುದಿಲ್ಲ. ಕ್ಷೇತ್ರದ ನಾಗರೀಕರು ಸ್ವಯಂ ಪ್ರೇರಣೆಯಿಂದ ಹೋರಾಟದಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.

Also read: ಗಮನಿಸಿ! ಫೆ. 24, 25ರಂದು ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ
ಕಳೆದ ದಿನಗಳ ಹಿಂದೆ ಕ್ಷೇತ್ರಕ್ಕೆ ಆಗಮಿಸಿದ್ದ ಪಂಚರತ್ನ ಯಾತ್ರೆ ಯಶಸ್ವಿಯಾಗಿದೆ. ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರಲ್ಲಿ ಮತ್ತಷ್ಟು ಆತ್ಮ ವಿಶ್ವಾಸ ಹೆಚ್ಚಿಸಿದ್ದು, ಯಶಸ್ವಿ ಕಾರಣಕರ್ತರಾದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಅಧ್ಯಕ್ಷರುಗಳಾದ ಆರ್. ಕರುಣಾಮೂರ್ತಿ, ಧರ್ಮಕುಮಾರ್, ಯುವ ಘಟಕದ ಜಿಲ್ಲಾಧ್ಯಕ್ಷ ಮಧುಕುಮಾರ್, ಪ್ರಮುಖರಾದ ತಿಮ್ಮೇಗೌಡ, ಕರಿಯಪ್ಪ, ಮೈಲಾರಪ್ಪ, ಉಮೇಶ್, ಮಧುಸೂದನ್, ಲೋಕೇಶ್ವರ್‌ರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.











Discussion about this post