ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ವಿಐಎಸ್‌ಎಲ್ ಉಳಿಸುವ ನಿಟ್ಟಿನಲ್ಲಿ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರು ದೇವರ ಮೊರೆ ಹೋಗಿದ್ದು, ಪುರಾಣ ಪ್ರಸಿದ್ಧ ಶ್ರೀ ಲಕ್ಷೀ ನರಸಿಂಹ ದೇವಾಲಯದಲ್ಲಿ ಉರುಳು ಸೇವೆ ಮಾಡಿದ್ದಾರೆ.
ಈಗಾಗಲೇ ಹಲವು ರೀತಿಯ ಹೋರಾಟಗಳನ್ನು ಕೈಗೊಂಡಿರುವ ಗುತ್ತಿಗೆ ಕಾರ್ಮಿಕರು ಹೋರಾಟದ ಒಂದು ಭಾಗವಾಗಿ ಧಾರ್ಮಿಕ ಆಚರಣೆಗಳನ್ನು ಸಹ ಕೈಗೊಳ್ಳುತ್ತಿದ್ದಾರೆ. ಮಂಗಳವಾರ ಸಂಜೆ ಹಳೇನಗರ ಪುರಾಣ ಪ್ರಸಿದ್ದ, ಕ್ಷೇತ್ರ ಪಾಲಕ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಉರುಳು ಸೇವೆ ನಡೆಸಿದರು.

ವಿಐಎಸ್‌ಎಲ್ ಕಾರ್ಖಾನೆ ಆವರಣದಲ್ಲಿ ಟ್ರಾಫಿಕ್ ಇಲಾಖೆಯ ಅಧಿಕಾರಿಗಳು, ಕಾರ್ಮಿಕರು ಮತ್ತು ಗುತ್ತಿಗೆ ಕಾರ್ಮಿಕರ ವತಿಯಿಂದ ಮಾ.31ರಂದು ಬೆಳಿಗ್ಗೆ 9 ಗಂಟೆಗೆ ಗಣಹೋಮ, ಶ್ರೀ ಚೌಡೇಶ್ವರಿ ಅಮ್ಮನವರ ಮಹಾಪೂಜೆ ಮತ್ತು 12 ಗಂಟೆಗೆ ಅನ್ನಸಂತರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿದೆ.
Also read: ರಾಜ್ಯದಲ್ಲಿ ಚುನಾವಣೆಗೆ ಎಷ್ಟು ಚೆಕ್ ಪೋಸ್ಟ್ ಸ್ಥಾಪನೆ: ಅಕ್ರಮ ತಡೆಗೆ ಏನೆಲ್ಲಾ ಕ್ರಮ?












Discussion about this post