ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ವಿಧಾನಸಭಾ ಚುನಾವಣೆಗೆ ಜಾತ್ಯಾತೀತ ಜನತಾದಳ ಮೊದಲ ಹಂತದ ಪಟ್ಟಿ ಘೋಷಿಸಿದ ನಂತರ ಕ್ಷೇತ್ರದಲ್ಲಿ ಪಕ್ಷದ ಕಾರ್ಯ ಚಟುವಟಿಕೆಗಳು ಮತ್ತಷ್ಟು ಚುರುಕಾಗಿದ್ದು, ಪಕ್ಷದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶಾರದ ಅಪ್ಪಾಜಿ Sharadha Appaji ತಮ್ಮ ನಿವಾಸದಲ್ಲಿ ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು ಹಾಗು ಕಾರ್ಯಕರ್ತರ ಸಭೆ ನಡೆಸಿದರು.
ಸಭೆಯಲ್ಲಿ ಬಹುತೇಕ ಮುಖಂಡರು ಮಾತನಾಡಿ, ಪ್ರತಿಯೊಬ್ಬರು ಸಹ ಶಾರದ ಅಪ್ಪಾಜಿಯವರ ಗೆಲುವಿಗೆ ಶಕ್ತಿಮೀರಿ ಶ್ರಮಿಸಬೇಕು. ಮನೆ ಮನೆಗೆ ತೆರಳಿ ಮಾಜಿ ಶಾಸಕ ಎಂ.ಜೆ. ಅಪ್ಪಾಜಿಯವರು ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ತಿಳಿಸುವ ಮೂಲಕ ಮತಯಾಚಿಸಬೇಕು. ಯಾವುದೇ ಭಿನ್ನಾಭಿಪ್ರಾಯಗಳಿಗೆ ಅವಕಾಶ ನೀಡಬಾರದು. ಪಕ್ಷವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಘಟಿಸುವ ಮೂಲಕ ಎಲ್ಲರೂ ಒಗ್ಗಟ್ಟಾಗಿ ಕಾರ್ಯ ನಿರ್ವಹಿಸಬೇಕೆಂದರು.

Also read: ಡಿ.27ರಿಂದ 29ರವರೆಗೂ ಶಿವಮೊಗ್ಗದಲ್ಲಿ ನಡೆಯಲಿದೆ ವಿಶೇಷ ಕಥಕ್ ಕಾರ್ಯಾಗಾರ
ಸಭೆಯಲ್ಲಿ ಪ್ರಮುಖರಾದ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ಸತೀಶ್, ಯುವ ಘಟಕದ ಅಧ್ಯಕ್ಷ ಮಧು ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜೆ.ಪಿ ಯೋಗೇಶ್, ಕರಿಯಪ್ಪ, ಡಿ.ಟಿ ಶ್ರೀಧರ್, ಮೈಲಾರಪ್ಪ, ಲೋಕೇಶ್ವರ್ ರಾವ್, ವೆಂಕಟೇಶ್, ನಂಜುಂಡೇಗೌಡ, ಗೊಂದಿ ಜಯರಾಂ, ಮುತುರ್ಜಾ ಖಾನ್, ವಿಶಾಲಾಕ್ಷಿ, ಯಶೋಧಮ್ಮ, ಭಾಗ್ಯಮ್ಮ, ನಗರಸಭೆ ಸದಸ್ಯ ಬಸವರಾಜ ಬಿ ಆನೇಕೊಪ್ಪ, ಉದಯಕುಮಾರ್, ಸವಿತ, ನಾಗರತ್ನ, ರೂಪಾವತಿ, ಪಲ್ಲವಿ, ಮಾಜಿ ಸದಸ್ಯ ರಾದ ಎಂ.ಎ ಅಜಿತ್, ಎಚ್.ಬಿ ರವಿಕುಮಾರ್, ಆನಂದ್, ಎಂ. ರಾಜು, ಉಮೇಶ್, ದಿಲೀಪ್ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.












Discussion about this post