ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಕ್ರಿಕೆಟ್ #Cricket ವಿಚಾರವಾಗಿ ಸ್ನೇಹಿತರ ಮಧ್ಯೆ ಜಗಳವಾಗಿ ಒಬ್ಬಾತನನ್ನು ಹತ್ಯೆ ಮಾಡಲಾಗಿದ್ದು, ಮತ್ತೋರ್ವನಿಗೆ ಗಾಯವಾಗಿರುವ ಘಟನೆ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಅರುಣ್ (23) ಕೊಲೆಯಾಗಿಗಿರುವ ವ್ಯಕ್ತಿ ಎನ್ನಲಾಗಿದ್ದು, ಘಟನೆಯಲ್ಲಿ ಸಂಜಯ್ ಎಂಬಾತ ಗಾಯಗೊಂಡಿದ್ದಾನೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಹಿನ್ನೆಲೆ
ಸೋಮವಾರ ಸಂಜೆ ಕ್ರಿಕೆಟ್ ಆಡಿದ್ದರು. ರಾತ್ರಿ ಮದ್ಯ ಸೇವಿಸುವಾಗ ಇದೇ ವಿಚಾರವಾಗಿ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಈ ಸಂದರ್ಭ ಹತ್ಯೆಯಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.
ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಪಾನಮತ್ತರಾಗಿರುವ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post