No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Friday, June 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭದ್ರಾವತಿ ನೆರೆ ಶಾಶ್ವತ ಪರಿಹಾರಕ್ಕೆ ಮುಂದಾಗಲಿ: ಡಾ. ಶಿವಮೂರ್ತಿ ಶ್ರೀಗಳು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 8, 2019
in Small Bytes, ಭದ್ರಾವತಿ
0
Share on FacebookShare on TwitterShare on WhatsApp

ಭದ್ರಾವತಿ: ರಾಜ್ಯದಲ್ಲಿ ಮಳೆ ಹಾವಳಿಯ ನೆರೆ-ಬರದಿಂದ ತತ್ತರಿಸಿದ್ದಾರೆ. ಬರಗಾಲ ಬಂದಾಗ ಕೇಂದ್ರಕ್ಕೆ ಪರಿಹಾರಕ್ಕಾಗಿ ಬೇಡಿಕೆ ಇಡುತ್ತೇವೆ. ಅದು ಶಾಶ್ವತ ಪರಿಹಾರವಾಗುವುದಿಲ್ಲ. ಶಾಶ್ವತ ಪರಿಹಾರ ಕಲ್ಪಿಸುವಂತೆ ಸರಕಾರಕ್ಕೆ ಬೇಡಿಕೆ ಇಟ್ಟರು ಪೂರ್ಣ ಪ್ರಮಾಣದ ಹಣ ಬಿಡುಗಡೆ ಮಾಡದಿರುವುದರಿಂದ ಸಮಸ್ಯೆಗಳು ಉಳಿದಿರುತ್ತವೆ ಎಂದು ಸಿರಿಗೆರೆ ತರಳಬಾಳು ಜಗದ್ಗುರು ಶ್ರೀ 1108 ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿ ಹೇಳಿದರು.

ಅವರು ನಗರದ ಜನ್ನಾಪುರ ಮಲ್ಲೇಶ್ವರ ಸಮುದಾಯ ಭವನದಲ್ಲಿ ತಾಲೂಕು ಸಾಧು ವೀರಶೈವ ಸಮಾಜ, ತರಳಬಾಳು ಯುವ ವೇದಿಕೆ ಆಯೋಜಿಸಿದ್ದ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳ 27 ನೇ ಶ್ರದ್ದಾಂಜಲಿ ಸಮಾರಂಭದ ದಾಸೋಹಕ್ಕೆ ಭಕ್ತಿ ಸಮರ್ಪಣೆ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಬರಪರಿಹಾರಕ್ಕಾಗಿ ಸರಕಾರಕ್ಕೆ ನೀರಾವರಿ ಯೋಜನೆ ಕಲ್ಪಿಸುವಂತೆ ಒತ್ತಡ ಏರಲಾಗಿ ಮುಖ್ಯಮಂತ್ರಿ ಯಡಿಯೂರಪ್ಪ 660 ಕೋಟಿ ರೂಗಳ ಪೂರ್ಣ ಪ್ರಮಾಣದ ಹಣ ಬಿಡುಗಡೆ ಮಾಡಿದ್ದಾರೆ. ನಮ್ಮ ಜನ ದುಡಿಯುವವರಿದ್ದು ಮುಂದೆ ಯಾವ ಕಾರಣಕ್ಕೂ ಕೇಂದ್ರಕ್ಕೆ ಪರಿಹಾರ ನೀಡುವಂತೆ ಬೇಡಿಕೆ ಇಡುವ ಪ್ರಶ್ನೆಯೆ ಇಲ್ಲ. ರಾಜ್ಯ ಸರಕಾರದ ಚಳಿಗಾಲ ಹಾಗೂ ಮಳೆಗಾಲದ ಎರಡು ಅಧಿವೇಶನಗಳು ನಡೆಯುತ್ತವೆ. ಆದರೆ ನಮ್ಮ ಮಠದಿಂದ ಅಧಿವೇಶನದಂತೆ ನಡೆಯುವ ದೊಡ್ಡ ಗುರುಗಳ ಭಕ್ತಿ ಸಮರ್ಪಣಾ ಶೃದ್ದಾಂಜಲಿ ಕಾರ್ಯಕ್ರಮವು ಸಿರಿಗೆರೆಯೂ ಸೇರಿದಂತೆ 4 ಕಡೆ ನಡೆಯುತ್ತವೆ. ಇಂತಹ ಭಕ್ತಿ ಸಮರ್ಪಣೆ ಸಮಾವೇಶಗಳು ವಿನೂತ ಭಾವನೆಯಿಂದ ನಡೆಯಬೇಕೆ ಹೊರತು ಅಹಂಕಾರದ ಸಮರ್ಪಣೆಯಾಗಬಾರದು. ಯುವ ಪೀಳಿಗೆ ಎಚ್ಚೆತ್ತು ಹಿರಿಯರ ಮಾರ್ಗದರ್ಶನದಲ್ಲಿ ಸಮಾಜ ಸೇವೆ ಮಾಡಲು ಮುಂದಾಗಬೇಕು ಎಂದು ಕರೆ ನೀಡಿದರು.

ಬದುಕಿನ ಎಲ್ಲಾ ರಂಗಗಳಲ್ಲಿಯೂ ಜನರನ್ನು ಹುರಿದುಂಬಿಸಿ ಸಾಧಕರನ್ನಾಗಿಸಿದವರು ಲಿಂಗೈಕ್ಯ ಗುರುಗಳು. ಸ್ವಾತಂತ್ರ್ಯ ಪೂರ್ವದಲ್ಲಿ ಅವರು ಮಾಡಿದ ಸಾಧನೆ, ಎಲ್ಲಾ ವರ್ಗೀಯ ಮಕ್ಕಳಿಗೆ ನೀಡಿರುವ ಊಟ ವಸತಿ ಸೌಕರ್ಯಗಳನ್ನು ಸಮಾಜ ಇಂದು ನೆನಪು ಮಾಡಿಕೊಳ್ಳುತ್ತದೆ. ಅಂದು ಅವರು ನೀರಾವರಿ ಯೋಜನೆಯನ್ನು ಜಾರಿಗೆ ತರದಿದ್ದರೆ ಇಂದು ಸಿರಿಗೆರೆಯ ಜನ ಗುಳೇ ಹೊರಡುವಂತಹ ಪರಿಸ್ಥಿತಿ ಎದುರಾಗುತ್ತಿತ್ತು. ಸೆ.24 ರಂದು ಸಿರಿಗೆರೆಯಲ್ಲಿ ಶಿವಕುಮಾರ ಮಹಾಸ್ವಾಮಿಗಳ ಶೃದ್ದಾಂಜಲಿ ಸಮಾರಂಭ ನಡೆಯಲಿದ್ದು ಎಲ್ಲಾ ಭಕ್ತರೂ ಆಗಮಿಸಬೇಕೆಂದರು.

ಬರಗಾಲವನ್ನು ತಪ್ಪಿಸಲು ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಗಳೂರಿನ ತರಳಬಾಳು ಹುಣ್ಣಿಮೆಯ ಸಮ್ಮೇಳನದಲ್ಲಿ ಬೇಡಿಕೆ ಇಟ್ಟಿದ್ದ ಜಗಳೂರು ಹಾಗು ಭರಮಸಾಗರ ಏತ ನೀರಾವರಿ ಯೋಜನೆಗಳಿಗೆ ಕ್ಯಾಬಿನೆಟ್‍ನಲ್ಲಿ ಅನುಮೋದನೆ ದೊರೆತಿದ್ದು ಹಣ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುವುದು.

ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ ಭಕ್ತಿ ಸಮರ್ಪಣಾ ಕಾರ್ಯಗಳು ಸದ್ಭಕ್ತರ ಜ್ಞಾನವನ್ನು ಹೆಚ್ಚಿಸುತ್ತದೆ. ನಡೆದಾಡುವ ದೇವರೆನಿಸಿಕೊಂಡಿರುವ ಶ್ರೀಗಳು ನೆರೆ ಸಂತ್ರಸ್ಥರಿಗೆ ಸ್ವಾಭಿಮಾನದ ಬದುಕು ಸಾಗಿಸಲು 1 ವರ್ಷಕ್ಕಾಗುವಷ್ಟು ಆಹಾರ ಬಟ್ಟೆ ಸೇರಿದಂತೆ ಇನ್ನಿತರೆ ವಸ್ತುಗಳನ್ನು ನೀಡಿ ಸಕಲವ್ಯವಸ್ಥೆ ಕಲ್ಪಿಸಿಕೊಟ್ಟಿರುವ ಅವರ ಮಹಾತ್ಕಾರ್ಯವನ್ನು ಯಾರೂ ಮರೆಯುವಂತಿಲ್ಲ. ಖಾದಿ, ಖಾಕಿ ಸೇರಿದಂತೆ ಎಲ್ಲರನ್ನೂ ಎಚ್ಚರಿಸುವ ಕೆಲಸ ಶ್ರೀಗಳು ಮಾಡುತ್ತಿದ್ದಾರೆ ಎಂದ ಅವರು ವಿಐಎಸ್‍ಎಲ್ ಕಾರ್ಖಾನೆಯನ್ನು ಅಭಿವೃದ್ದಿಗೊಳಿಸುವ ಕೆಲಸ ಮಾಡಲಾಗುತ್ತಿದೆ. ಇದರಿಂದ ಕಾರ್ಮಿಕರು, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.

ಶಾಸಕ ಬಿ.ಕೆ. ಸಂಗಮೇಶ್ವರ್ ಮಾತನಾಡಿ, ಲಿಂಗೈಕ್ಯ ಶ್ರೀಗಳು ನೇರ ನುಡಿಯ ಸಾಮಾಜಿಕ ಕಳಕಳಿಹೊತ್ತು ಪಾದರಸದಂತೆ ಕೆಲಸ ಮಾಡಿದ್ದಾರೆ ಎಂದರು.

ಸಾಧು ವೀರಶೈವ ಸಮಾಜದ ಅಧ್ಯಕ್ಷೆ ಯಶೋಧ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹೊಸಮನೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಜಿ. ದನಂಜಯ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಎಸ್.ರುದ್ರೇಗೌಡ, ಸಮಾಜದ ಮುಖಂಡರಾದ ಎಂ.ವಿರೂಪಾಕ್ಷಪ್ಪ, ಕೆ.ಸಿ.ವೀರಭದ್ರಪ್ಪ, ಹೆಚ್.ಎಲ್. ಷಡಾಕ್ಷರಿ, ಕೆ.ಜಿ.ರವಿಕುಮಾರ್, ಎಚ್.ಎಸ್. ಸಂಜೀವಕುಮಾರ್, ಶೇಖರಪ್ಪ, ಮಂಗೋಟೆ ರುದ್ರೇಶ್, ಹೆಬ್ಬಂಡಿ ಲೋಕೇಶಪ್ಪ, ಎಚ್.ಆರ್. ಬಸವರಾಜಪ್ಪ ಮುಂತಾದವರಿದ್ದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiFloods in MalnadKannada NewsMalnad NewsShivamoggaನೆರೆ-ಬರಭದ್ರಾವತಿಮಳೆ ಹಾವಳಿಸಾಧು ವೀರಶೈವ ಸಮಾಜ
Share215Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎಲ್ಲ ಕಾಲಘಟ್ಟಕ್ಕೆ ಸಲ್ಲುವ ಸಾಹಿತ್ಯ ಕುವೆಂಪು ಅವರದ್ದು: ಗುರುರಾಜ ಪೋಶೆಟ್ಟಿಹಳ್ಳಿ ಅಭಿಮತ

Next Post

ಭದ್ರಾವತಿ: ಅಶ್ವಥ್ ನಗರ ಆರೋಗ್ಯ ಕೇಂದ್ರದಲ್ಲಿ ಪೋಷಣ್ ಅಭಿಯಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ: ಅಶ್ವಥ್ ನಗರ ಆರೋಗ್ಯ ಕೇಂದ್ರದಲ್ಲಿ ಪೋಷಣ್ ಅಭಿಯಾನ

ಭದ್ರಾವತಿ: ಅಶ್ವಥ್ ನಗರ ಆರೋಗ್ಯ ಕೇಂದ್ರದಲ್ಲಿ ಪೋಷಣ್ ಅಭಿಯಾನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗ್ರಾಮೀಣ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಂಸದ ರಾಘವೇಂದ್ರ ಸೂಚನೆ

ಗ್ರಾಮೀಣ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಂಸದ ರಾಘವೇಂದ್ರ ಸೂಚನೆ

June 18, 2026
ಎಸ್‍ಐಆರ್ ಪ್ರಕ್ರಿಯೆ | ಎಚ್ಚರಿಕೆ ಹೆಜ್ಜೆ ಅತ್ಯಗತ್ಯ: ಕಿಮ್ಮನೆ ರತ್ನಾಕರ್

ಎಸ್‍ಐಆರ್ ಪ್ರಕ್ರಿಯೆ | ಎಚ್ಚರಿಕೆ ಹೆಜ್ಜೆ ಅತ್ಯಗತ್ಯ: ಕಿಮ್ಮನೆ ರತ್ನಾಕರ್

June 18, 2026
Mysore - Shivamogga - Talguppa Train

ಮೈಸೂರು – ಮದಾರ್ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ಹೆಚ್ಚುವರಿ ರೈಲು ಸೇವೆ ವಿಸ್ತರಣೆ

June 18, 2026
ವಿದ್ಯುತ್ ವಿತರಣಾ ವ್ಯವಸ್ಥೆ ಖಾಸಗೀಕರಣ ನಿರ್ಧಾರ ಕೈಬಿಡಿ: ಮಾಜಿ ಡಿಸಿಎಂ ಈಶ್ವರಪ್ಪ

ವಿದ್ಯುತ್ ವಿತರಣಾ ವ್ಯವಸ್ಥೆ ಖಾಸಗೀಕರಣ ನಿರ್ಧಾರ ಕೈಬಿಡಿ: ಮಾಜಿ ಡಿಸಿಎಂ ಈಶ್ವರಪ್ಪ

June 18, 2026
Shivamogga Police : Traffic Rules

ಶಾಲಾ – ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆಗಾಗಿ ಸಂಚಾರಿ ನಿಯಮ ಪಾಲಿಸಿ: ಪೊಲೀಸ್ ಉಪಾಧೀಕ್ಷಕ ಸಂಜೀವ್ ಕುಮಾರ್

June 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL