ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಶಾಸಕರ ನಿಧಿಯಿಂದ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ತಾಲೂಕಿನಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ್ ಅವರು 100 ಹಾಸಿಗೆಯ ಕೋವಿಡ್ ಕೆರ್ ಸೆಂಟರ್ ಕಾರ್ಯರೂಪಕ್ಕೆ ತಂದಿದ್ದಾರೆ. ಇದರ ಬೆನ್ನಲ್ಲೇ 45 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ಸವಲತ್ತುಗಳನ್ನು ಹೊಂದಿರುವ ಎರಡು ಆಂಬ್ಯುಲೆನ್ಸ್ ತರುವಲ್ಲಿ ಯಶಸ್ವಿಯಾಗಿದ್ದರು. ಮತ್ತೆ ಇಂದು ಒಂದು ಆಂಬ್ಯುಲೆನ್ಸ್‌ಗೆ ಹಸಿರು ನಿಶಾನೆ ತೋರಿಸುವ ಮೂಲಕ ಜನರ ಸೇವೆಗೆ ಲೋಕಾರ್ಪಣೆಗೊಳಿಸಿದರು.
ಶೀಘ್ರದಲ್ಲೇ ಇನ್ನು ಒಂದು ಆಂಬ್ಯುಲೆನ್ಸ್ ಅತ್ಯಾಧುನಿಕ ಸವಲತ್ತುಗಳೊಂದಿಗೆ ಲೋಕಾರ್ಪಣೆಗೊಳಿಸಲಾಗುವುದು ಎಂದು ಶಾಸಕರು ಇದೇ ಸಂದರ್ಭದಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ದಂಡಾಧಿಕಾರಿ ಸಂತೋಷ್ ಕುಮಾರ್, ನಗರಸಭಾ ಆಯುಕ್ತ ಪರಮೇಶ್ವರ್, ತಾಲ್ಲೂಕು ಆರೋಗ್ಯಾಧಿಕಾರಿ ಅಶೋಕ್, ತಾಲ್ಲೂಕು ವೈದ್ಯಾಧಿಕಾರಿ ಮಲ್ಲಪ್ಪ, ನಗರಸಭಾ ಸದಸ್ಯ ಸುದೀಪ್ ಕುಮಾರ್, ಉದ್ಯಮಿ ಮಾದಣ್ಣ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post