ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ನಗರಸಭೆ ಚುನಾವಣೆಯಲ್ಲಿ ಉಪ್ಪಾರ ಸಮಾಜದವರು ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಕೆ ಗಿರೀಶ್ ಉಪ್ಪಾರ ಮನವಿ ಮಾಡಿದರು.
ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಮ-ಮನೆ ಮತಯಾಚನೆ ನಡೆಸುವ ಸಂದರ್ಭದಲ್ಲಿ ಸಮಾಜದ ಮುಖಂಡರೆಲ್ಲರೂ ಸೇರಿ ಈ ಬಾರಿ ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಬೆಂಬಲಿಸುವ ನಿಟ್ಟಿನಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಬಿಜೆಪಿ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಉಪ್ಪಾರ ಸಮಾಜದ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆದಿವೆ. ಎಲ್ಲಾ ರೀತಿಯಿಂದಲೂ ಸಮಾಜವನ್ನು ಪ್ರೋತ್ಸಾಹಿಸುತ್ತಿರುವ ಬಿಜೆಪಿ ಪಕ್ಷ ಬೆಂಬಲಿಸುವುದು ಸೂಕ್ತವಾಗಿದ್ದು, ಶಾಂತಿ, ಸೌಹಾರ್ದತೆಯನ್ನು ಕಾಪಾಡಲು ಹಾಗೂ ಸಮಾಜದವರನ್ನು ಬೆದರಿಸಿ ಅಥವಾ ಅಮಿಷಗಳ ಮೂಲಕ ಮತ ಪಡೆಯಲು ಯತ್ನಿಸುವುದನ್ನು ಸಮಾಜ ವಿರೋಧಿಸುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ತಮ್ಮ ಹಕ್ಕನ್ನು ಚಲಾಹಿಸುವ ಅಧಿಕಾರವಿದೆ. ಮತ ಚಲಾಯಿಸುವ ಹಕ್ಕಿಗೆ ಯಾವುದೇ ರೀತಿ ಚ್ಯುತಿ ಬರಬಾರದು ಎಂದರು.

ಸುದ್ದಿಗೋಷ್ಠಿಯಲ್ಲಿ ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಸತ್ಯನಾರಾಯಣ, ತಾಲೂಕು ಪ್ರಧಾನ ಕಾರ್ಯದರ್ಶಿ ಅವಿನಾಶ್, ಭಗೀರಥ ಯುವಕರ ಸಂಘದ ಜಿಲ್ಲಾಧ್ಯಕ್ಷ ಮುರುಳಿ, ನಿಗಮದ ನಿರ್ದೇಶಕ ಓಂಕಾರಪ್ಪ, ಮುಖಂಡರಾದ ಅಣ್ಣಪ್ಪ, ಅವಿನಾಶ್, ಕೆ.ಟಿ ಶ್ರೀನಿವಾಸ್ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















