ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ನಿರಂತರ ವ್ಯಾಯಾಮ, ದೈಹಿಕ ಶ್ರಮ ವಹಿಸಿ ಕೆಲಸ ಮಾಡುವುದಿರಂದ 40 ವರ್ಷಗಳ ನಂತರ ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಮೂಳೆ ಸವೆತ ಹಾಗೂ ಇನ್ನಿತರ ಆರೋಗ್ಯ ಸಮಸ್ಯೆಗಳಿಂದ ಪಾರಾಗಲು ಸಾಧ್ಯ ಎಂದು ಸ್ತ್ರೀ ರೋಗ ತಜ್ಞೆ ಡಾ. ವೀಣಾ ಎಸ್ ಭಟ್ ಅಭಿಪ್ರಾಯಪಟ್ಟರು.
ನಗರದ ಹಳೇನಗರ ಮಹಿಳಾ ಸೇವಾ ಸಮಾಜ, ತಾಲೂಕು ಒಕ್ಕಲಿಗರ ಮಹಿಳಾ ವೇದಿಕೆ ಹಾಗೂ ಹುಬ್ಬಳ್ಳಿಯ ಮೇಯರ್ ಆರ್ಗ್ಯಾನಿಕ್ ಪ್ರೈವೇಟ್ ಲಿ., ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಉಚಿತ ಮೂಳೆ ಸಾಂದ್ರತೆ ಚಿಕಿತ್ಸೆ ಹಾಗೂ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಋತು ಚಕ್ರದ ಪ್ರಾರಂಭದಿಂದ ನಿಲ್ಲುವವರೆಗೂ ಮಹಿಳೆಯರು ಹಲವಾರು ಹಂತಗಳನ್ನು ದಾಟಿ ಜೀವನ ನಡೆಸಬೇಕಿದೆ. ಈ ಹಿನ್ನಲೆಯಲ್ಲಿ ಉತ್ತಮ ಆರೋಗ್ಯ ಹೊಂದುವುದು ಹೆಚ್ಚು ಅವಶ್ಯಕ. 30 ವರ್ಷಗಳವರೆಗೆ ಮಹಿಳೆಯರು ನಿರಂತರವಾಗಿ ಮೂಳೆ ಸಾಂದ್ರತೆ ಪರೀಕ್ಷೆ ಮಾಡಿಸಿಕೊಳ್ಳುವ ಜೊತೆಗೆ ಭವಿಷ್ಯದಲ್ಲಿ ಎದುರಾಗುವ ಮೂಳೆ ಸವೆತದಿಂದ ಪಾರಾಗಲು ಅಗತ್ಯವಿರುವ ಕ್ರಮಗಳನ್ನು ರೂಢಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಮಹಿಳಾ ಸೇವಾ ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ್, ಒಕ್ಕಲಿಗರ ಮಹಿಳಾ ವೇದಿಕೆ ಅಧ್ಯಕ್ಷೆ ಅನ್ನಪೂರ್ಣ ಸತೀಶ್ ಅಧ್ಯಕ್ಷತೆ ವಹಿಸಿದ್ದರು.
ಪ್ರಮುಖರಾದ ಶೋಭಾ ಗಂಗರಾಜ್, ಜಯಂತಿ ಶೇಟ್, ಶಕುಂತಲ, ಲೋಹಿತಾ ನಂಜಪ್ಪ, ವಿಶ್ವೇಶ್ವರಯ್ಯ, ಪ್ರಜ್ವಲ್, ಉಮೇಶ್, ಶಾರದ ರಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news















