ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಯೋಗಾಸನ ಮತ್ತು ಸೂರ್ಯ ನಮಸ್ಕಾರವನ್ನು ನಿಯಮಿತವಾಗಿ ಪಾಲನೆ ಮಾಡುವುದರಿಮದ ಉತ್ತಮ ಆರೋಗ್ಯ ಹೊಂದಲು ಸಾಧ್ಯ ಎಂದು ಡಾ. ಸೆಲ್ವರಾಜ್ ಅಭಿಪ್ರಾಯಪಟ್ಟರು.
ರಥಸಪ್ತಮಿ ನಿಮಿತ್ತ ಶುಗರ್ ಟೌನ್ ಲಯನ್ಸ್ ಕ್ಲಬ್, ಲಯನ್ಸ್ ಯೋಗ ಸಂಸ್ಥೆ ಮತ್ತು ಪತಂಜಲಿ ಯೋಗ ಸಮಿತಿ ವತಿಯಿಂದ ನ್ಯೂಟೌನ್ ಲಯನ್ಸ್ ಕಣ್ಣಿನ ಆಸ್ಪತ್ರೆ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ೧೦೮ ಸೂರ್ಯ ನಮಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ನಮ್ಮ ಆರೋಗ್ಯ ರಕ್ಷಣೆಗೆ ಯೋಗಾಸನ ಮತ್ತು ಸೂರ್ಯ ನಮಸ್ಕಾರ ಸಹಕಾರಿಯಾಗಿವೆ. ಯೋಗಾಸನ ಮಾಡುವ ಹವ್ಯಾಸ ಬೆಳೆಸಿಕೊಂಡಾಗ ಅದನ್ನು ನಿರಂತರವಾಗಿ ಮಾಡಬೇಕು ಎನ್ನುವ ಮನೋಭಾವ ಬೆಳೆಯುವ ಜೊತೆಗೆ ಸೋಮಾರಿತನ ದೂರವಾಗುತ್ತದೆ ಎಂದು ಹೇಳಿದರು.
ಯೋಗಾಸನ ಮತ್ತು ಸೂರ್ಯ ನಮಸ್ಕಾರ ಅವುಗಳದ್ದೇ ಆದ ವೈದ್ಯಕೀಯ ಹಿನ್ನಲೆ ಹೊಂದಿವೆ. ಇದಕ್ಕೆ ವಯಸ್ಸಿನ ಮಿತಿ ಇಲ್ಲ. ಎಲ್ಲರೂ ಇದರಲ್ಲಿ ತೊಡಗಿಸಿಕೊಳ್ಳಬಹುದಾಗಿದ್ದು, ನಿರಂತರ ಚಟುವಟಿಕೆಯಲ್ಲಿ ತೊಡಗುವ ವ್ಯಕ್ತಿಗಳಿಂದ ಎಲ್ಲಾ ಕಾರ್ಯಗಳು ಸಾಧ್ಯವಾಗುತ್ತದೆ ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post