ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಕಳೆದ ಡಿ.22ರಂದು ನಡೆದಿದ್ದ 35 ಗ್ರಾಮ ಪಂಚಾಯ್ತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಹಳೇ ನಗರದ ಸಂಚಿ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಾಳೆ ನಡೆಯಲಿದ್ದು, ಸಕಲ ಸಿದ್ದತೆ ನಡೆದಿದೆ.
ಮತ ಎಣಿಕೆ ಕಾರ್ಯಕ್ಕೆ 75 ಎಣಿಕೆ ಮೇಲ್ವಿಚಾರಕರು ಹಾಗೂ 150 ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ. ಒಟ್ಟು 154 ಚುನಾವಣಾ ಕ್ಷೇತ್ರಗಳ ಮತ ಎಣಿಕೆಗೆ 75 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ.

ಶಿವಮೊಗ್ಗದ ಉಪವಿಭಾಗಾಧಿಕಾರಿ ಪ್ರಕಾಶ್ ಟಿ.ವಿ. ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.
ಭದ್ರಾವತಿ ತಾಲೂಕಿನ 35 ಗ್ರಾಮ ಪಂಚಾಯಿತಿಗಳ 419 ಸ್ಥಾನಗಳಿಗೆ 1070 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ. ಅವರಲ್ಲಿ 44 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















