ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಸತತ ನಾಲ್ಕನೇ ಬಾರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯನಾಗಿ ಎರಡು ಲಕ್ಷಗಳ ಅಧಿಕ ಮತಗಳ ಅಂತರದಿಂದ ಚುನಾಯಿತನಾಗಲು ಪಕ್ಷದ ಎಲ್ಲಾ ಕಾರ್ಯಕರ್ತರ ತಳ ಹಂತದ ಪರಿಶ್ರಮ ಬೆಲೆ ಕಟ್ಟಲಾಗದು. ನನ್ನ ಮೇಲೆ ನೀವು ಇಟ್ಟಿರುವ ಅಚಲ ವಿಶ್ವಾಸಕ್ಕೆ ನಾನು ಸದಾ ಚಿರಋಣಿಯಾಗಿದ್ದೇನೆ ಎಂದು ಸಂಸದ ಬಿ.ವೈ. ರಾಘವೇಂದ್ರ #B Y Raghavendra ಹೇಳಿದರು.
ಬಿಜೆಪಿ ನಗರ ಮಂಡಲ ಪಟ್ಟಣದ ಶ್ರೀ ಮಂಜುನಾಥ ಕಲ್ಯಾಣ ಮಂಟಪದಲ್ಲಿ ಲೋಕಸಭಾ ಹಾಗೂ ವಿಧಾನಪರಿಷತ್ ಚುನಾವಣೆಯಲ್ಲಿ ಶ್ರಮಿಸಿದ ಪಕ್ಷದ ಕಾರ್ಯಕರ್ತರಿಗೆ ಹಾಗೂ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಸಹಕರಿಸಿದ ಹಿತೈಷಿಗಳಿಗೆ ಕೃತಜ್ಞತೆ ತಿಳಿಸಲು ಹಮ್ಮಿಕೊಂಡಿದ್ದ “ಕೃತಜ್ಞತಾ – ಅಭಿನಂದನಾ ಸಮಾರಂಭ” ದಲ್ಲಿ ಪಾಲ್ಗೊಂಡು, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ನಿಮ್ಮ ನಿರೀಕ್ಷೆಗೆ ತಕ್ಕಂತೆ ಕ್ಷೇತ್ರದಲ್ಲಿ ಮತ್ತಷ್ಟು ಹುಮ್ಮಸ್ಸಿನಿಂದ ಅಭಿವೃದ್ಧಿ ಕಾರ್ಯಗಳನ್ನು ಜಾರಿಗೆ ತರುವ ಮೂಲಕ ಕಾರ್ಯನಿರ್ವಹಿಸುತ್ತೇನೆ ಜೊತೆಗೆ ನಿಮ್ಮ ಆಶೋತ್ತರಗಳನ್ನು ನೆರೆವೇರಿಸುವ ಸಂಕಲ್ಪ ತೊಡುತ್ತೇನೆ ಎಂದು ಆಶ್ವಾಸನೆ ನೀಡಿದರು.
Also read: ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯೇ ತಮ್ಮ ಗುರಿ: ಶಾಸಕ ಶೈಲೇಂದ್ರ ಬೆಲ್ದಾಳೆ
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಅನುಷ್ಠಾನಕ್ಕೆ ತಂದಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿಕೊಂಡು ಹಾಗೂ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಅಂತ್ಯೋದ್ಯಯ ಪರಿಕಲ್ಪನೆಯಡಿ ಜನರ ಜೀವನ ಮಟ್ಟ ಸುಧಾರಿಸಲು ಜಾರಿಗೆ ತಂದ ಐತಿಹಾಸಿಕ ಜನಪರ ಯೋಜನೆಗಳ ಮೇಲೆ ನಂಬಿಕೆ ಇಟ್ಟು ಮತನೀಡಿದ ಕ್ಷೇತ್ರದ ಮತದಾರ ಬಾಂಧವರಿಗೆ ಈ ವೇದಿಕೆಯ ಮೂಲಕ ಕೃತಜ್ಞತೆ ಸಲ್ಲಿಸಲು ನಾನು ಉತ್ಸುಕನಾಗಿದ್ದೇನೆ. ಭವಿಷ್ಯದಲ್ಲಿ ನನ್ನ ಲೋಕಸಭಾ ಕ್ಷೇತ್ರವನ್ನು ಎಲ್ಲಾ ರಂಗದಲ್ಲಿಯೂ ಅಭಿವೃದ್ಧಿ ಪಥದ ಹಾದಿಯಲ್ಲಿ ತರುವ ಮೂಲಕ ಕಾರ್ಯಯೋಜನೆ ಕೈಗೊಳ್ಳುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಮೇಘರಾಜ್, ವಿಧಾನಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ, ಬಿಜೆಪಿ ಭದ್ರಾವತಿ ಅಧ್ಯಕ್ಷ ಧರ್ಮ ಪ್ರಸಾದ್, ಪ್ರಮುಖರಾದ ಭಾನುಪ್ರಕಾಶ್, ರುದ್ರೇಶ್, ಹಾಲೇಶಪ್ಪ, ಮಂಜುನಾಥ್, ಕದಿರೇಶ್, ಆನಂದ್, ಕರುಣಾಮೂರ್ತಿ, ಶಾರದಾ ಅಪ್ಪಾಜಿ, ಚಂದ್ರಶೇಖರ್ ಸೇರಿದಂತೆ ಮಂಡಲದ ಎಲ್ಲಾ ಪ್ರಮುಖ ಕಾರ್ಯಕರ್ತರು, ಮುಖಂಡರು, ಗಣ್ಯರು ಹಾಗೂ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post