No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಶಾಂತಿಯುತ: ಹಿಂದೂ ನಾವೆಲ್ಲ ಒಂದು-ಕೇಸರಿ ಅಬ್ಬರ

*ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಗಣಪತಿ *ಅಪಾರ ಭಕ್ತರ ದಂಡು *ಬಗೆ ಬಗೆಯ ಕಲಾ ತಂಡಗಳ ಝೆಂಕಾರ *ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆ

kalpa News by kalpa News
September 10, 2019
in ಭದ್ರಾವತಿ
0
ಭದ್ರಾವತಿ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಶಾಂತಿಯುತ: ಹಿಂದೂ ನಾವೆಲ್ಲ ಒಂದು-ಕೇಸರಿ ಅಬ್ಬರ
Share on FacebookShare on TwitterShare on WhatsApp

ಭದ್ರಾವತಿ: ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರಸೇನಾ ಹಾಗೂ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಟಾಪಿಸಲಾಗಿರುವ 47 ನೇ ವರ್ಷದ ಗಣೇಶ ವಿಸರ್ಜನಾ ಕಾರ್ಯಕ್ರಮಕ್ಕೆ ಮಂಗಳವಾರ ಬೆಳಿಗ್ಗೆ ಶಾಸಕ ಬಿ.ಕೆ. ಸಂಗಮೇಶ್ವರ್, ತಹಸೀಲ್ದಾರ್ ಸೋಮಶೇಖರ್ ವಿಶೇಷ ಪೂಜಾ ವಿಧಿ ವಿಧಾನಗಳಿಂದ ಪೂಜೆ ಸಲ್ಲಿಸಿ ಚಾಲನೆ ನೀಡಿದರು.


ಪೂಜೆ ಸಲ್ಲಿಸಿ ಚಾಲನೆ ನೀಡಿದ ನಂತರ ಭಕ್ತರ ಘೋಷಣೆಗಳೊಂದಿಗೆ ಶ್ರೀ ವಿನಾಯಕ ಮೂರ್ತಿಯ ವಿಸರ್ಜನೆ ಪೂರ್ವ ರಾಜಬೀದಿ ಉತ್ಸವ ಮೆರವಣಿಗೆ ನೆರವೇರಿತು.

ಶ್ರೀ ಮೂರ್ತಿಯನ್ನು ಹೊಸಮನೆ ಶಿವಾಜಿ ವೃತ್ತದಿಂದ ಮೆರವಣಿಗೆ ಮೂಲಕ ಸಾಗುತ್ತಿದ್ದ ಸಂದರ್ಭದಲ್ಲಿ ಸಂಸದ ಬಿ.ವೈ. ರಾಘವೇಂದ್ರ ನೆರೆದಿದ್ದ ಜನಸ್ತೋಮದ ನಡುವೆ ಸಾಗಿದರು.

ಹೆಚ್ಚಿನ ಪೊಲೀಸ್ ಬಂದೋಬಸ್ತಿನ ನಡುವೆ ಪ್ರಮುಖ ರಸ್ತೆಗಳಲ್ಲಿ ಸಾಗಿದ ಉತ್ಸವ ಮೂರ್ತಿ ಗಣಪತಿಯನ್ನು ರಸ್ತೆಯುದ್ದಕ್ಕೂ ಭಕ್ತಾದಿಗಳು ಪೂಜೆ ಸಲ್ಲಿಸಿದರು.

ಮಂದಗತಿಯಲ್ಲಿ ಸಾಗುತ್ತ ಸಂಜೆ 4 ಗಂಟೆಗೆ ರಂಗಪ್ಪ ವೃತ್ತ ತಲುಪಿದಾಗ ಯುವಕರ ಪಡೆ ಜೈ ಶ್ರೀರಾಮ್, ಹಿಂದೂ ನಾವೆಲ್ಲ ಒಂದು ಎಂಬಿತ್ಯಾದಿ ಘೋಷಣೆಗಳನ್ನು ಕೂಗುತ್ತಾ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಈ ನಡುವೆ ಬೈಕ್ ರ್ಯಾಲಿ ನಿಷೇಧಿಸಿದ್ದರು ಸಹ ಕೆಲವು ಯುವಕರು ಬೈಕ್‍ಗಳ ಕರ್ಕಶ ಶಬ್ದ ಮಾಡುತ್ತಾ ಕೇಸರಿ ಧ್ವಜಗಳನ್ನು ಹಿಡಿದು ರಸ್ತೆಗಳಲ್ಲಿ ಸಾಗಿದರು. ರಸ್ತೆ ಉದ್ದಕ್ಕೂ ಯುವಕ-ಯುವತಿಯರು ಹುಚ್ಚೆದ್ದು ಕುಣಿಯುತ್ತಾ ಸಂತಸ ವ್ಯಕ್ತಪಡಿಸಿದರು.

ಕೆಲವು ಸಂಘ ಸಂಸ್ಥೆಗಳ ಮುಖಂಡರು ಬೃಹತ್ ಹೂವಿನ ಹಾರಗಳನ್ನು ವಿನಾಯಕನಿಗೆ ಸಮರ್ಪಿಸಿ ಭಕ್ತಿಯ ಪರಾಕಾಷ್ಟೆ ಮೆರೆದರು. ನಗರದೆಲ್ಲೆಡೆ ಕೇಸರಿ ಮಯವಾಗಿ ಗೋಚರಿಸುತ್ತಿತ್ತು.

ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ಥಗೊಂಡು ನಗರ ಸಂಚಾರ ಬಸ್‍ಗಳನ್ನು ಸ್ಥಗಿತಗೊಳಿಸಲಾಗಿತ್ತು. ಎಂದಿನಂತೆ ಮಂಗಳವಾರ ನಗರದಲ್ಲಿ ವ್ಯಾಪಾರ ವಹಿವಾಟುಗಳು ಸ್ಥಗಿತಗೊಂಡಿದ್ದ ಕಾರಣ ಅಘೋಷಿತ ಬಂದ್ ನಂತೆ ಕಾಣುತ್ತಿತ್ತು.

ವಿನಾಯಕ ವಿಸರ್ಜನೆ ಸಂದರ್ಭದಲ್ಲಿ ನಗರದ ನಾನಾ ಭಾಗಗಳಲ್ಲಿ ಉದ್ದಕ್ಕೂ ಚಿತ್ರನ್ನ, ಮೊಸರನ್ನ, ಕೋಸಂಬರಿ, ಕುಡಿಯಲು ನೀರು ವ್ಯವಸ್ಥೆ ಕಲ್ಪಿಸಲಾಗಿತ್ತು. ಮೆರವಣಿಗೆಯು ರಂಗಪ್ಪ ವೃತ್ತ, ಮಾಧವಚಾರ್ ವೃತ್ತ, ಹಾಲಪ್ಪ ವೃತ್ತ, ಡಾ.ಅಂಬೇಡ್ಕರ್ ವೃತ್ತದ ಮೂಲಕ ಸಾಗಿ ಹುತ್ತಾ ಕಾಲೋನಿಯಿಂದ ಪುನಃ ಹಿಂದಿರುಗಿ ಅದೇ ಮಾರ್ಗವಾಗಿ ಸಾಗಿದೆ. ರಾತ್ರಿ ನಗರಸಭೆ ಮುಂಭಾಗದ ಭದ್ರಾ ನದಿಯಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಶ್ರೀ ವಿನಾಯಕ ಮೂರ್ತಿಯನ್ನು ವಿಸರ್ಜಿಸಲಾಗುತ್ತದೆ.


ಸಮಿತಿ ಅಧ್ಯಕ್ಷ ವಿ.ಕದಿರೇಶ್ ಹಾಗು ಪದಾಧಿಕಾರಿಗಳು ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಉಪ ಮಹಾಪೌರ ಚನ್ನಬಸಪ್ಪ, ವಿವಿಧ ಸಂಘ ಸಂಸ್ಥೆಗಳ ಮುಖಂಡರಾದ ಜಿ.ಆನಂದಕುಮಾರ್, ಪ್ರವೀಣ್ ಪಟೇಲ್, ಬಿ.ಎಸ್.ಗಣೇಶ್, ರಾಮಣ್ಣ, ಧರ್ಮಪ್ರಸಾದ್, ಎನ್. ವಿಶ್ವನಾಥರಾವ್, ಕೆ. ಮಂಜುನಾಥ್, ಸುದೀಪ್, ಹೇಮಾವತಿ, ಫೋಕಸ್ ಮಂಜುನಾಥ್, ಐತಾಳ್, ಕೂಡ್ಲಿಗೆರೆ ಹಾಲೇಶ್ ಸೇರಿದಂತೆ ಹಿಂದೂ ಸಂಘಟನೆಗಳಾದ ಕೇಸರಿಪಡೆ, ಹಿಂದೂಪಡೆ, ಶ್ರೀರಾಮಸೇನೆ, ಭಜರಂಗದಳ, ಎಬಿವಿಪಿ ಮುಂತಾದ ಹಿಂದೂಪರ ಸಂಘಟನೆಗಳ ಪ್ರಮುಖರು ಭಾಗವಹಿಸಿದ್ದರು.


ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶಾಂತರಾಜ್ ಸೇರಿದಂತೆ ಒಟ್ಟು ಇಬ್ಬರು ವರಿಷ್ಟಾಧಿಕಾರಿಗಳು, ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಶೇಖರ್ ಠಕ್ಕಣ್ಣನವರ್, 8 ಡಿವೈಎಸ್‍ಪಿಗಳು, 17 ಸಿಪಿಐ, 23 ಸಬ್‍ಇನ್ಸ್‍ಪೆಕ್ಟರ್‍ಗಳು, 79 ಎಎಸ್‍ಐ, 796 ಪೇದೆ ಮತ್ತು ಮುಖ್ಯಪೇದೆಗಳು, 350 ಗೃಹ ರಕ್ಷಕದಳ, ಕೆಎಸ್‍ಆರ್‍ಪಿ 400, ಡಿಎಆರ್ 8 ತುಕಡಿಗಳು, ಆರ್‍ಎಎಫ್‍ನ 50 ಜನರ ತಂಡ, ಕ್ಯಾಮರಮನ್ ಒಟ್ಟು 75 ಮಂದಿ, ಎಎನ್‍ಎಸ್‍ನ 30 ಜನರ ತಂಡಗಳೊಂದಿಗೆ ಒಟ್ಟು 1600 ಮಂದಿ ರಕ್ಷಣಾ ಸಿಬ್ಬಂದಿ ಕರ್ತವ್ಯ ನಿರ್ವಹಿಸಿದ್ದರು.

ಮೆರವಣಿಗೆಯ ಇನ್ನಷ್ಟು ಚಿತ್ರಗಳನ್ನು ನೋಡಿ

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiGanapathi processionHindu MahasabhaJai SriRamKannada NewsMalnad NewsMP B Y Ragahvendraಭದ್ರಾವತಿಶ್ರೀರಾಮ್ಸಂಸದ ಬಿ.ವೈ. ರಾಘವೇಂದ್ರಹಿಂದೂ ನಾವೆಲ್ಲ ಒಂದುಹಿಂದೂ ಮಹಾಸಭಾ ಗಣಪತಿ ಮೆರವಣಿಗೆಹಿಂದೂ ರಾಷ್ಟ್ರಸೇನಾ
Share225Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ವಿಶೇಷ ಆಕರ್ಷಣೆಯೇನು ಗೊತ್ತಾ? ನೋಡಿದರೆ ಎದೆಯುಬ್ಬುತ್ತದೆ!

Next Post

ಶ್ರೀಮದ್ ಭಾಗವತ- ಭಕ್ತರ ಬದುಕಿನ ಸಂಜೀವಿನಿ: ಭಗವಂತನ ಧ್ಯಾನದ ಬಗೆಯನ್ನು ಹೇಗೆ ಕಲಿಯುವುದು?

kalpa News

kalpa News

Next Post
ಶ್ರೀಮದ್ ಭಾಗವತ- ಭಕ್ತರ ಬದುಕಿನ ಸಂಜೀವಿನಿ: ಭಗವಂತನ ಧ್ಯಾನದ ಬಗೆಯನ್ನು ಹೇಗೆ ಕಲಿಯುವುದು?

ಶ್ರೀಮದ್ ಭಾಗವತ- ಭಕ್ತರ ಬದುಕಿನ ಸಂಜೀವಿನಿ: ಭಗವಂತನ ಧ್ಯಾನದ ಬಗೆಯನ್ನು ಹೇಗೆ ಕಲಿಯುವುದು?

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL