ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಸೆ.8ರ ನಾಳೆ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವ ನಡೆಯಲಿದ್ದು, ನಗರದಾದ್ಯಂತ ಭಾರೀ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಭದ್ರತೆಗೆ ಎಷ್ಟು ಮಂದಿ ನಿಯೋಜನೆ?
ಜಿಲ್ಲಾ ರಕ್ಷಣಾಧಿಕಾರಿ ಹಾಗೂ ಹೆಚ್ಚುವರಿ ರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ 1500ಕ್ಕೂ ಮಂದಿಯನ್ನು ಭದ್ರತೆಗಾಗಿ ನಿಯೋಜನೆಗೊಳಿಸಲಾಗಿದೆ.
01 ಹೆಚ್ಚುವರಿ ಪೊಲೀಸ್ ಅಧಿಕ್ಷಕರು, 09 ಪೊಲೀಸ್ ಉಪಾಧೀಕ್ಷಕರು, 18 ಪೋಲಿಸ್ ನಿರೀಕ್ಷಕರು, 27 ಪೊಲೀಸ್ ಉಪನಿರೀಕ್ಷಕರು, 1000 ಪೊಲೀಸ್ ಸಿಬ್ಬಂದಿಗಳು, 400 ಗೃಹರಕ್ಷಕ ದಳ ಸಿಬ್ಬಂದಿಗಳು, 01 ಆರ್ ಎ ಎಫ್ ಕಂಪನಿ (200 ಅಧಿಕಾರಿ ಮತ್ತು ಸಿಬ್ಬಂದಿಗಳು), 06 ಕೆಎಸ್ಆರ್.ಪಿ ತುಕಡಿಯ ( 120 ಅಧಿಕಾರಿ ಮತ್ತು ಸಿಬ್ಬಂದಿಗಳು), 06 ಡಿಎಆರ್ ತುಕಡಿ(48 ಅಧಿಕಾರಿ ಹಾಗೂ ಸಿಬ್ಬಂದಿ)ಗಳನ್ನು ನಿಯೋಜನೆಗೊಳಿಸಲಾಗಿದೆ.
ಪೊಲೀಸ್ ಇಲಾಖೆ ಜೊತೆಗೆ ರ್‍ಯಾಪಿಡ್ ಆಕ್ಷನ್ ಫೋರ್ಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಸಹ ನಿಯೋಜನೆಗೊಳಿಸುವ ಸಾಧ್ಯತೆ ಇದೆ. ರಾಜಬೀದಿ ಉತ್ಸವ ಮೆರವಣಿಗೆ ನಡೆಯುವ ಪ್ರಮುಖ ರಸ್ತೆಗಳ ಆಯಾಕಟ್ಟಿನ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ನಗರಸಭೆ ವತಿಯಿಂದ ಬ್ಯಾರಿಗೇಡಿಗಳನ್ನು ನಿರ್ಮಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post