ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಇಲ್ಲಿನ ಬಿಹೆಚ್ ರಸ್ತೆಯಲ್ಲಿ ಯುವಕನೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಿರವ ಘಟನೆ ಇಂದು ಮಧ್ಯಾಹ್ನದ ವೇಳೆಗೆ ನಡೆದಿದೆ.
ಹತ್ಯೆಯಾದ ಯುವಕನನ್ನು ಹೇಮಂತ್ ಕುಮಾರ್ (32) ಎಂದು ಗುರುತಿಸಲಾಗಿದ್ದು, ಬಿಹೆಚ್ ರಸ್ತೆಯಲ್ಲಿ ಇಂದು ಮಧ್ಯಾಹ್ನದ ವೇಳೆಗೆ ಘಟನೆ ನಡೆದಿದೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಮಹಜರು ನಡೆಸುತ್ತಿದ್ದಾರೆ.
ಹಳೇ ದ್ವೇಷದ ಶಂಕೆ?
ಕಳೆದ ಎರಡು ತಿಂಗಳ ಹಿಂದೆ ಭದ್ರಾವತಿ ಬೊಮ್ಮನಕಟ್ಟೆಯಲ್ಲಿ ಯುವಕನೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಇದು ಹಿಂದೂ-ಮುಸ್ಲಿಂ ದ್ವೇಷ ಎಂಬ ಬಣ್ಣವನ್ನು ಸಹ ಆಗ ಪಡೆದುಕೊಂಡಿತ್ತು. ಆಗ ಹತ್ಯೆಗೊಳಗಾದ ಯುವಕನ ಸಹೋದರ ಹಾಗೂ ಸ್ನೇಹಿತರು ಇಂದು ದ್ವೇಷಕ್ಕಾಗಿ ಹೇಮಂತ್ ಕುಮಾರ್ನನ್ನು ಹತ್ಯೆ ಮಾಡಿದ್ದಾರೆ ಎಂದು ಹೇಳಲಾಗಿದೆ.
Also read: ಶೀಘ್ರ ಬರ ಪರಿಹಾರ ಬಿಡುಗಡೆಗೊಳಿಸಲು ಪ್ರಧಾನಿ ಮೋದಿ ಅವರಿಗೆ ಮನವಿ: ಸಿಎಂ ಸಿದ್ಧರಾಮಯ್ಯ
ಪೊಲೀಸರು ಸ್ಥಳ ಮಹಜರು ನಡೆಸಿದ್ದು, ಮರಣೋತ್ತರ ಪರೀಕ್ಷೆಗೆ ಮೃತ ದೇಹವನ್ನು ರವಾನಿಸಿದ್ದಾರೆ. ಹತ್ಯೆಗೆ ನಿಖರ ಕಾರಣ ತನಿಖೆಯಿಂದಷ್ಟೇ ಹೊರಬರಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post