ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಈದ್ ಮಿಲಾದ್ #Eidmilad ಮೆರವಣಿಗೆಯಲ್ಲಿ ಕೆಲವು ಕಿಡಿಗೇಡಿಗಳು `ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆಗಳನ್ನು ಕೂಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ತಪ್ಪಿತಸ್ಥರನ್ನು ತಕ್ಷಣ ಪೊಲೀಸರು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೇಸರಿಪಡೆ ಅಧ್ಯಕ್ಷ ಬಿ.ಆರ್ ಗಿರೀಶ್ ಆಗ್ರಹಿಸಿದ್ದಾರೆ.
ನಗರದಲ್ಲಿ ಶಾಂತಿ ಸೌಹಾರ್ದತೆಯಿಂದ ಎಲ್ಲಾ ಹಬ್ಬ-ಹರಿದಿನಗಳನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಆದರೂ ಕೆಲವು ಕಿಡಿಗೇಡಿಗಳು ಆಶಾಂತಿ ವಾತಾವರಣ ಉಂಟು ಮಾಡುವ ಮೂಲಕ ಸೌಹಾರ್ದತೆಗೆ ಧಕ್ಕೆ ತರುತ್ತಿದ್ದಾರೆ.
ಹಿಂದೂ ಧರ್ಮ, ಸಂಸೃತಿಗಾಗಿ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರುತ್ತಿರುವ ಕೇಸರಿಪಡೆ ಯಾವುದೇ ಕಾರಣಕ್ಕೂ ಈ ರೀತಿಯ ಕೃತ್ಯಗಳನ್ನು ಬೆಂಬಲಿಸುವುದಿಲ್ಲ. `ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆಗಳನ್ನು ಕೂಗಿರುವುದು ಅಕ್ಷಮ್ಯ ಅಪರಾಧಿ ಕೃತ್ಯವಾಗಿದ್ದು, ತಕ್ಷಣ ತಪ್ಪಿತಸ್ಥರನ್ನು ಪೊಲೀಸರು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
Discussion about this post