ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳಲು ಖಾಸಗಿ ಶಾಲೆಗಳು ಹೆಚ್ಚಿನ ಶುಲ್ಕ ಪಡೆಯುತ್ತಿರುವುದನ್ನು ವಿರೋಧಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ತಾಲೂಕು ಕಛೇರಿ ಮುಂಭಾಗದಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಕೊರೋನಾ ಲಾಕ್‌ಡೌನ್‌ನಿಂದಾಗಿ ಸಾರ್ವಜನಿಕರು ಸಂಕಷ್ಟದಲ್ಲಿದ್ದು, ರಾಜ್ಯ ಸರ್ಕಾರವು ಮಕ್ಕಳ ಶಾಲಾ ದಾಖಲಾತಿಗಾಗಿ ಹೆಚ್ಚುವರಿ ಶುಲ್ಕ ವಸೂಲು ಮಾಡುವಂತಿಲ್ಲ ಎಂದು ಸೂಚಿಸಿದೆ. ಆದರೂ ಸರ್ಕಾರದ ಆದೇಶವನ್ನು ಲೇಕಿಸದೆ ಕೆಲವು ಖಾಸಗಿ ಶಾಲೆಗಳು ಅತಿ ಹೆಚ್ಚು ಹಣವನ್ನು ಪಡೆಯುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ಮಾಡಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಸಂಘಟನೆಯ ಮನವಿಗೆ ಸ್ಪಂದಿಸಿದ ತಹಶಿಲ್ದಾರ್ ಅವರು ತಕ್ಷಣವೇ ಎಲ್ಲಾ ಖಾಸಗಿ ಶಾಲೆಗಳ ಆಡಳಿತ ವರ್ಗ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ನಮ್ಮ ಪಕ್ಷದ ಪದಾಧಿಕಾರಿಗಳಿಗೆ ಜಂಟಿ ಸಭೆ ನಡೆಸಿ, ಖಾಸಗಿ ಶಾಲೆಗಳ ಆಕ್ರಮಕ್ಕೆ ಕಡಿವಾಣ ಹಾಕಲಾಗುವುದು ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ಅಂತ್ಯ ಮಾಡಲಾಯಿತು.
ನಂತರ ಫೀಸ್ ಇಳಿಸಿ ಅಭಿಯಾನದ ಕರಪತ್ರ ಉದ್ಘಾಟನೆ ಮಾಡಲಾಯಿತು. ಈ ಸಂದರ್ಭದಲ್ಲಿ ಖದಿರ್, ಟಿಠಿ ಜೋಸೆಫ್, ಹಿಬ್ರಾಹಿಂ ಖಾನ್, ರಮೇಶ್, ರವಿಕುಮಾರ್, ಜಾವೇದ್, ನಾಸಿಬಬೆಗಂ, ಬಸವಕುಮಾರ್, ಪರಮೇಶ್ ನಾಯ್ಕ, ರೇಷ್ಮೆ ಭಾನು ಹಾಗು ಇತರರು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post