ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ನಗರದ ಬಸ್ ನಿಲ್ದಾಣದ ಸಮೀಪವಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ಸರ್ಕಾರದ ಉದ್ದೇಶವನ್ನು ನಗರಸಭೆ ಆಯುಕ್ತರು ದುರ್ಬಳಕೆ ಮಾಡಿಕೊಂಡಿರುವುದನ್ನು ತಾಲೂಕು ಬಿಜೆಪಿ ಘಟಕ ಖಂಡಿಸಿದೆ.
ಕೋವಿಡ್ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಬಡವರು ಮತ್ತು ನಿರ್ಗತಿಕರಿಗೆ ಅನುಕೂಲವಾಗಲೆಂದು ರಾಜ್ಯ ಸರ್ಕಾರ ವತಿಯಿಂದ ಇಂದಿರಾ ಕ್ಯಾಂಟಿನ್‌ಗಳ ಮೂಲಕ ಉಪಹಾರ ನೀಡುವ ವ್ಯವಸ್ಥೆ ಮಾಡಿದ್ದು, ಸದರಿ ಒಂದು ಸಾವಿರ ಜನರಿಗೆ ಉಪಹಾರ ಹಾಗೂ ಊಟ ತಯಾರಾಗುತ್ತಿದೆ. ಆದರೆ, ಬೆರಳೆಣಿಕೆಯಷ್ಟು ಜನರಿಗೆ ಮಾತ್ರ ನೀಡಿ, ಇನ್ನುಳಿದ ಉಪಹಾರ ಮತ್ತು ಊಟವನ್ನು ನಗರಸಭೆ ಆಯುಕ್ತರು ದುರಪಯೋಗಪಡಿಸಿಕೊಳ್ಳುತ್ತಿದ್ದಾರೆ. ಈ ವಿಚಾರವನ್ನು ಕೂಲಂಕುಷವಾಗಿ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ರೀತಿಯ ಕಾನೂನು ಕ್ರಮ ಜರುಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಒತ್ತಾಯಿಸಿದೆ.
ಕ್ಯಾಂಟಿನ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಎಂ. ಪ್ರಭಾಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ. ಶ್ರೀನಾಥ್, ಉಪಾಧ್ಯಕ್ಷ ಮಣಿ, ಮುಖಂಡರಾದ ರಾಮನಾಥ ಬರ್ಗೆ, ಅವಿನಾಶ್, ಚನ್ನೇಶ್ ಹಾಗೂ ಜೆಡಿಎಸ್ ನಗರಸಭಾ ಸದಸ್ಯರಾದ ಪಲ್ಲವಿ ದಿಲೀಪ್, ಸವಿತಾ ಉಮೇಶ್, ಪಕ್ಷೇತರ ನಗರಸಭಾ ಸದಸ್ಯ ಮೋಹನ್ ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post