ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಇಲ್ಲಿನ ಹಳೆ ನಗರದಲ್ಲಿರುವ ಐತಿಹಾಸಿಕ ಪ್ರಸಿದ್ಧ ಶ್ರೀಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯಕ್ಕೆ ಇನ್ಫೋಸಿಸ್ Infosys ಸುಧಾ ನಾರಾಯಣ ಮೂರ್ತಿ Sudha Narayanamurthy ಅವರು ಇಂದು ಭೇಟಿ ನೀಡಿದ್ದರು.
ಇಂದು ಮುಂಜಾನೆ ದೇವಾಲಯಕ್ಕೆ ಭೇಟಿ ನೀಡಿದ ಅವರು, ವಿಶೆಷ ಪೂಜೆ ಸಲ್ಲಿಸಿದರು. ಹೊಯ್ಸಳರ ಸಾಮ್ರಾಜ್ಯದ ಅವಧಿಯಲ್ಲಿ ನಿರ್ಮಾಣವಾದ ಈ ದೇವಾಲಯವನ್ನು ವೀಕ್ಷಿಸಿದ ಅವರು, ಇಲ್ಲಿನ ಕಲ್ಲಿನ ಕೆತ್ತನೆಗಳಿಗೆ ಪ್ರಶಂಸೆ ವ್ಯಕ್ತಪಡಿಸಿದರು. ದೇವಸ್ಥಾನದ ವತಿಯಿಂದ ಸುಧಾಮೂರ್ತಿ ಅವರಿಗೆ ಗೌರವ ಸಮರ್ಪಿಸಿ, ಪ್ರಸಾದ ನೀಡಲಾಯಿತು.
Also read: 2020-21ನೇ ಸಾಲಿನ ಕ್ರೀಡಾ ಪ್ರಶಸ್ತಿ ಘೋಷಣೆ…
ಈ ಸಂದರ್ಭದಲ್ಲಿ ದೇವಾಲಯದ ಪ್ರಧಾನ ಅರ್ಚಕರಾದ ರಂಗನಾಥ ಶರ್ಮ ಸಹಾಯಕ ಅರ್ಚಕರಾದ ಶ್ರೀನಿವಾಸ್, ಪ್ರಮುಖರಾದ ಜನಾರ್ಧನ ಅಯ್ಯಂಗಾರ್., ನರಸಿಂಹಾಚಾರ್, ಮಾರುತಿರಾವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post