ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ವಿನಾಯಕ ಚತುರ್ಥಿ Vinayaka Chathurthi ಅಂಗವಾಗಿ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ವೃತ್ತದಲ್ಲಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿವಿಗಾಗಿ 13ನೇ ವರ್ಷದ ವಿನಾಯಕ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದು, ಶುಕ್ರವಾರ ಗಣಹೋಮ ನಡೆಯಿತು.
ಕಾಗದನಗರ ನಾಗರಕಟ್ಟೆ ದೇವಸ್ಥಾನದ ಕಿರಿಯ ಅರ್ಚಕರಾದ ಚಿನ್ಮಯಿ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ಕಾರ್ಖಾನೆ ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗು ಗುತ್ತಿಗೆ ಕಾರ್ಮಿಕರು, ಸ್ಥಳೀಯ ನಿವಾಸಿಗಳು ಪಾಲ್ಗೊಂಡಿದ್ದರು.

Also read: ಭೂಮಿ ಹುಣ್ಣಿಮೆ: ಸಾಂಪ್ರದಾಯಿಕವಾಗಿ ಭೂತಾಯಿಗೆ ಉಡಿ ತುಂಬಿದ ರೈತರು
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಎಚ್. ರವಿಕುಮಾರ್, ರಮೇಶ್ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post