ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ(ವಿಐಎಸ್’ಎಲ್) ಕಾರ್ಮಿಕರ ಸಂಘದ ಅಧ್ಯಕ್ಷರಾಗಿ ಜೆ. ಜಗದೀಶ್ ಅವರು ಮರು ಆಯ್ಕೆಯಾಗಿದ್ದಾರೆ.
ಇಂದು ನಡೆದ ಸಂಘದ ಚುನಾವಣೆಯಲ್ಲಿ ಜಗದೀಶ್ ಅವರು 117 ಮತಗಳನ್ನು ಗಳಿಸುವ ಮೂಲಕ ಎರಡನೆಯ ಇನ್ನಿಂಗ್ಸ್ ಆರಂಭಿಸಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಸುರೇಶ್ 38 ಮತ್ತು ಶ್ರೀ ನಿವಾಸ್ 63 ಮತಗಳನ್ನು ಪಡೆದುಕೊಂಡಿದ್ದಾರೆ.
ಇನ್ನು, ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಶೈಲಶ್ರೀ ಮತ್ತು ಕುಮಾರ್ ಆಳ್ವಾ ಇಬ್ಬರು 89 ಸಮನಾದ ಮತಗಳನ್ನು ಹಾಗೂ ರಾಘವೇಂದ್ರ 37 ಮತಗಳನ್ನು ಪಡೆದುಕೊಂಡರು. ಉಪಾಧ್ಯಕ್ಷ ಸ್ಥಾನಕ್ಕೆ ಲಾಟರಿ ಮೂಲಕ ಆಯ್ಕೆ ನಡೆದು ಮೊದಲ ಅವಧಿಗೆ ಕುಮಾರ್ ಆಳ್ವಾ ಹಾಗೂ ಎರಡನೆಯ ಅವಧಿಗೆ ಶೈಲಶ್ರೀ ಆಯ್ಕೆಯಾಗಿದ್ದಾರೆ. ಕಾರ್ಮಿಕ ಸಂಘದ ಚುನಾವಣೆ ಇತಿಹಾಸದಲ್ಲಿ ಎರಡನೆಯ ಬಾರಿಗೆ ಮಹಿಳೆಯೊಬ್ಬರು ಆಯ್ಕೆಯಾಗಿ ಗಮನ ಸೆಳೆದಿದ್ದಾರೆ.
125 ಮತಗಳನ್ನು ಪಡೆದಿರುವ ಪ್ರಧಾನ ಕಾರ್ಯದರ್ಶಿಯಾಗಿ ಬಸಂತ್‌ಕುಮಾರ್ ಆಯ್ಕೆಯಾಗಿದ್ದಾರೆ. ಉಳಿದಂತೆ ಎಂ.ಎಲ್. ಯೋಗೀಶ್, ಮನೋಹರ್, ಸುನಿಲ್, ರಾಜು, ಕುಮಾರಸ್ವಾಮಿ, ಮಂಜುನಾಥ್ ಆಯ್ಕೆಯಾಗಿದ್ದಾರೆ.
ಇಳಯರಾಜ ಮತ್ತು ಅಡವೀಶಯ್ಯ ಚುನಾವಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post