ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಜನ್ನಾಪುರ-ಹುತ್ತಾ ತೆರಿಗೆದಾರರ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರಸಭೆ ಪೌರಾಯುಕ್ತ ಕೆ. ಪರಮೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.
ಜನ್ನಾಪುರ-ಹುತ್ತಾ ವ್ಯಾಪ್ತಿಯಲ್ಲಿ ಯುಜಿಡಿ ಕಾಮಗಾರಿಯನ್ನು ಅರ್ಧಕ್ಕೆ ಸ್ಥಗಿತಗೊಳಿಸಲಾಗಿದ್ದು, ಇದರಿಂದಾಗಿ ಶೌಚಾಲಯದ ಗುಂಡಿಗಳು ಭರ್ತಿಯಾಗಿ ತೊಂದರೆ ಉಂತಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ಕಾಮಗಾರಿ ಪೂರ್ಣಗೊಳಿಸಿ ಸಂಪರ್ಕ ಕಲ್ಪಿಸಿಕೊಡುಬೇಕು. ಹಾಗೂ ಎಲ್ಲರಿಗೂ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಡಬೇಕು. ಅಲ್ಲಲ್ಲಿ ನೀರಿನ ಕೊಳವೆಗಳು ಹಾಳಾಗಿ ನೀರು ಸೋರಿಕೆಯಾಗುತ್ತಿದೆ. ಶೀಘ್ರವೇ ದುರಸ್ತಿ ಕಾರ್ಯ ಕೈಗೊಳ್ಳಬೇಕು. ಮತ್ತು ತ್ವರಿತವಾಗಿ ಜನ್ನಾಪುರ ಕೆರೆ ಶುದ್ಧೀಕರಣ ಮಾಡುವಂತೆ ಒತ್ತಾಯಿಸಲಾಯಿತು.
ಬೀದಿನಾಯಿ, ಸೊಳ್ಳೆಕಾಟ ಹೆಚ್ಚಾಗಿದ್ದು, ತಕ್ಷಣ ಕ್ರಮ ಕೈಗೊಳ್ಳುವುದು. ಹಾಗೂ ನಗರಸಭೆ ಎನ್‌ಟಿಬಿ ಶಾಖಾ ಕಛೇರಿಯಲ್ಲಿ ಕಂದಾಯ ಪಾವತಿಸಲು ಕಂಪ್ಯೂಟರ್ ವಿಭಾಗ ತೆರೆಯುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಕೆ.ಎಂ. ಸತೀಶ್, ಉಪಾಧ್ಯಕ್ಷ ಬಿ. ಯಲ್ಲಪ್ಪ, ಕಾರ್ಯದರ್ಶಿ ಬಿ. ಚಂದ್ರಶೇಖರಯ್ಯ, ಸಹಕಾರ್ಯದರ್ಶಿ ಬಿ.ಎಂ. ಚಂದ್ರಪ್ಪ, ಖಜಾಂಚಿ ಭದ್ರಯ್ಯ, ಸದಸ್ಯರಾದ ಜೆಪಿಎಸ್ ಚಂದ್ರಶೇಖರ್, ಪಿ. ಶಿವನ್, ಚಂದು, ಜಿ.ಟಿ. ಚಂದ್ರಶೇಖರ್, ಎನ್. ಕೃಷ್ಣಪ್ಪ ಮತ್ತು ರುದ್ರೇಶ್ ಇನ್ನಿತರರು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















