ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ VISL ಆವರಣದಲ್ಲಿ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ, ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ನಮ್ಮ ಕಾರ್ಯಪಾಲಕ ನಿರ್ದೇಶಕ ಬಿ.ಎಲ್. ಚಂದ್ವಾನಿ, ಮುಖ್ಯ ಮಹಾಪ್ರಬಂಧಕ (ವರ್ಕ್ಸ್) ಕೆ.ಎಸ್. ಸುರೇಶ್, ವಿಐಎಸ್‌ಎಲ್ ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್, ವಿಐಎಸ್‌ಎಲ್ ಅಧಿಕಾರಿಗಳ ಸಂಘದ ಉಪಾಧ್ಯಕ್ಷ ನಿತಿನ್ ಜೋಸ್, ಮುಖ್ಯ ಮಹಾಪ್ರಬಂಧಕ (ವರ್ಕ್ಸ್), ವಿಐಎಸ್‌ಎಲ್ ಕಾರ್ಮಿಕ ಸಂಘದ ಮತ್ತು ಅಧಿಕಾರಿಗಳ ಸಂಘದ ಅಧ್ಯಕ್ಷರು, ಪದಾದಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರುಗಳು, ಹಿರಿಯ ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು ಭಾಗವಹಿಸಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















