ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ತಾಲೂಕಿನಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಬೆನ್ನಲ್ಲೇ ಹಲವು ಪ್ರಕರಣಗಳು ಪತ್ತೆಯಾದ ಕೂಡ್ಲಿಗೆರೆಯ ವಿವಿಧ ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ.
ಕೂಡ್ಲಿಗೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಲವು ಪ್ರದೇಶಗಳನ್ನು ಇಂದು ಸೀಲ್ ಡೌನ್ ಮಾಡಿ, ಸ್ಯಾನಿಟೈಸ್ ಮಾಡಲಾಗಿದೆ.
ಇನ್ನು, ಗ್ರಾಮದಲ್ಲಿ ಕೋವಿಡ್ ಬಗ್ಗೆ ಜನರಿಗೆ ಅರಿವು ಮೂಡಿಸುವ ಕಾರ್ಯವನ್ನು ಮಾಡಲಾಯಿತು. ಟಾಸ್ಕ್ ಫೋರ್ಸ್ ಮೀಟಿಂಗ್ ಮಾಡಿ ಪಂಚಾಯ್ತಿ ತೆಗೆದು ಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿ ನಾಳೆಯಿಂದ ಬೆಳಗ್ಗೆ 5ರಿಂದ ಬೆಳಗ್ಗೆ 8ರವರೆಗೆ ಮಾತ್ರ ಅಗತ್ಯವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಅನಗತ್ಯವಾಗಿ ತಿರುಗಾಡುವವರ ವಿರುದ್ಧ ಶಿಸ್ತು ಕ್ರಮ ಜರುಗಿಸಲು ತೀರ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಲಕ್ ಬಿ ವೀರಪ್ಪನ್, ಸದಸ್ಯರಾದ ರುದ್ರೇಶ.ಆರ್.ಎನ್, ವಿಶ್ವನಾಥ್, ಸ್ವಾಮಿನಾಥನ್, ಗೌರಮ್ಮ ಮಹದೇವ್, ಸಿದ್ದಮ್ಮ ನಾಗೇಶ್ , ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಅಶೋಕ್ ರವರು, ಕೂಡ್ಲಿಗೆರೆ ನಾಡ ಕಛೇರಿ ಉಪ ತಹಶೀಲ್ದಾರ್ ನರಾಯಣಗೌಡ್ರು, ಗ್ರಾಮ ಲೆಕ್ಕಾಧಿಕಾರಿ ಜ್ಞಾನೇಶ್ ರವರು, ಅರಬೀಳಚಿ ಆರೋಗ್ಯ ಕೇಂದ್ರ ವೈದ್ಯರಾದ ಡಾ ಜಗದೀಶ್ ರವರು, ಆರಕ್ಷಕ ಸಿಬ್ಬಂದಿ, ವಿವಿಧ ಇಲಾಖೆಗಳ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post