ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಇಲ್ಲಿನ ಹಳೇನಗರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಲಕ್ಷದೀಪೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಜರುಗಿತು.
ಲಕ್ಷ ದೀಪೋತ್ಸವದ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೇ ಮೂಲ ದೇವರಿಗೆ ವಿಶೇಷ ಅಭಿಶೇಕ, ಪೂಜೆ ಹಾಗೂ ಅಲಂಕಾರ ಮಾಡಲಾಗಿತ್ತು. ಕಾರ್ಯಕ್ರಮದ ವಿಶೇಷ ಮೆರುಗಾಗಿ ಕರಾವಳಿ ಬಳಗದ ಸದಸ್ಯರು ನೃತ್ಯ ಮಾಡುವ ಮೂಲಕ ಗಮನ ಸೆಳೆದರು.
ನಂತರ ಗೋಪಾಲಕೃಷ್ಣ ಆಚಾರ್ಯರಿಂದ ಪೂಜಾ ವಿಧಿವಿಧಾನ ಹಾಗೂ ಮಹಾಮಂಗಳಾರತಿ ನಡೆಯಿತು. ಪ್ರಧಾನ ಅರ್ಚಕರಾದ ಸತ್ಯನಾರಾಯಣ ಹಾಗೂ ಅಧ್ಯಕ್ಷರಾದ ಮುರಳೀಧರ್ ತಂತ್ರಿ, ನಿರಂಜನ್ ಆಚಾರ್, ಉಪಾಧ್ಯಕ್ಷರಾದ ಸುಮಾ ರಾಘವೇಂದ್ರ ತಂತ್ರಿ, ಪ್ರಧಾನ ಕಾರ್ಯದರ್ಶಿಯಾದ ರಮಾಕಾಂತ್ ಹಾಗೂ ಭಕ್ತವೃಂದದಿಂದ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post