No Result
View All Result
English Articles

Record Budget: Chief Minister Must Fulfill Hometown Demands, Urges Dr. Shushrutha Gowda

by ಕಲ್ಪ ನ್ಯೂಸ್
March 2, 2026
0

Kalpa Media House  |  Mysuru | BJP leader and noted neurologist Dr. Shushrutha Gowda has urged Chief Minister Siddaramaiah to...

Read moreDetails
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
  • Advertise With Us
  • Grievances
  • About Us
  • Contact Us
Wednesday, March 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಕಳೆಗಟ್ಟಿದ ಭದ್ರಾವತಿ: ಲಕ್ಷ್ಮೀ ನರಸಿಂಹ ದೇವರಿಗೆ ಅದ್ದೂರಿ ಬ್ರಹ್ಮರಥೋತ್ಸವ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 19, 2019
in ಭದ್ರಾವತಿ
0
ಕಳೆಗಟ್ಟಿದ ಭದ್ರಾವತಿ: ಲಕ್ಷ್ಮೀ ನರಸಿಂಹ ದೇವರಿಗೆ ಅದ್ದೂರಿ ಬ್ರಹ್ಮರಥೋತ್ಸವ
Share on FacebookShare on TwitterShare on WhatsApp

ಭದ್ರಾವತಿ: ಹಳೇನಗರದ 13 ನೇ ಶತಮಾನದ ಹೊಯ್ಸಳರ ಕಾಲದ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವರ ಬ್ರಹ್ಮರಥೋತ್ಸವವು ಶನಿವಾರ ವಿಜೃಂಭಣೆಯಿಂದ ನೆರವೇರಿತು.

ದೇವಾಲಯದ ಮುಖ್ಯ ಅರ್ಚಕ ವೇ!!ಬ್ರ!! ರಂಗನಾಥ ಶರ್ಮ, ಸಹಾಯಕ ಅರ್ಚಕರಾದ ಶ್ರೀನಿವಾಸ ಹಾಗು ನರಸಿಂಹಚಾರ್ ಮತ್ತಿತರೆ ಅರ್ಚಕರ ನೇತೃತ್ವದಲ್ಲಿ ನಸುಕಿನ ಜಾವ ಯಾಗಶಾಲೆಯಲ್ಲಿ ಹೋಮ ನಡೆಯಿತು. ಪಲ್ಲಕ್ಕಿಯಲ್ಲಿ ಸುದರ್ಶನ ಚಕ್ರವಿರಿಸಿ ರಥಬೀದಿಯಲ್ಲಿ ಬಲಿ ಉತ್ಸವ ಬಲಿಹರಣ ನೆರವೇರಿಸಲಾಯಿತು. ನಂತರ ರಥದ ಕಳಸ ಪೂಜೆ ಮಾಡಲಾಯಿತು. ದೇವಾಲಯದಲ್ಲಿ ಮೂಲ ದೇವರಿಗೆ ಮತ್ತು ಉತ್ಸವ ದೇವರಿಗೆ ಪೂಜೆ ಸಲ್ಲಿಸಿದ ತರುವಾಯ ರಥಬೀದಿಯಲ್ಲಿ ದೇವರ ಉತ್ಸವ ನಡೆಯಿತು.

ಮಧ್ಯಾಹ್ನ ಭೂದೇವಿ, ಶ್ರೀದೇವಿ ಸಹಿತನಾದ ಶ್ರೀನಿವಾಸ ದೇವರ ಉತ್ಸವ ಮೂರ್ತಿಯನ್ನು ರಥಾರೋಹಣ ಮಾಡುತ್ತಿದ್ದಂತೆ ಸಾವಿರಾರು ಸಂಖ್ಯೆಯಲ್ಲಿ ನೆರದಿದ್ದ ಭಕ್ತಾದಿಗಳು ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವರಿಗೆ ಜಯಘೋಷಗಳನ್ನು ಹಾಕುತ್ತಾ ರಥದ ಕಳಸದ ಮೇಲೆ ಬಾಳೆಹಣ್ಣು, ಉತ್ತುತ್ತಿ, ಕರಿಮೆಣಸು ಕಾಳನ್ನು ಮತ್ತಿತರೆ ಹರಕೆ ಹೊತ್ತ ವಸ್ತುಗಳನ್ನು ಎಸೆಯುತ್ತಾ ಹರಕೆ ಸಲ್ಲಿಸಿದರು. ರಥಾರೂಢನಾದ ದೇವರಿಗೆ ನೈವೇದ್ಯ, ಮಹಾಮಂಗಳಾರತಿ ನೆರವೇರಿಸಿ ಪ್ರಸಾದ ವಿನಿಯೋಗಿಸಲಾಯಿತು.

ರಥೋತ್ಸವ ಸಂಧರ್ಭದಲ್ಲಿ ಮುಜರಾಯಿ ಅಧಿಕಾರಿ ಹಾಗು ತಹಶೀಲ್ದಾರ್ ಸೋಮಶೇಖರ್, ಆಡಳಿತಾಧಿಕಾರಿ ಹಾಗು ಕಂದಾಯಾಧಿಕಾರಿ ಪ್ರಶಾಂತ್, ಗ್ರಾಮ ಲೆಕ್ಕಾಧಿಕಾರಿ ಪ್ರೇಮ್, ನಗರಸಭಾ ಸದಸ್ಯ ಆನಂದಕುಮಾರ್, ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ರಮಾಕಾಂತ್, ಮುಖಂಡ ಜನಾರ್ಧನ್ ಅಯ್ಯಂಗಾರ್ ಮುಂತಾದವರು ಹಾಜರಿದ್ದರು.

ರಥೋತ್ಸವ ವೀಕ್ಷಿಸಲು ಹಾಗೂ ದೇವರ ದರ್ಶನ ಭಾಗ್ಯ ಪಡೆಯಲು ತಾಲೂಕಿನ ಸುತ್ತಮುತ್ತಲ ಗ್ರಾಮಗಳಿಂದ ಸಹಸ್ರಾರು ಭಕ್ತರು ದರ್ಶನ ಭಾಗ್ಯ ಪಡೆದು ಪುನೀತರಾದರು. ದೇವಾಲಯದ ಅರ್ಚಕರ ನಿವಾಸದಲ್ಲಿ ಮತ್ತು ದೀಕ್ಷತ್ ಟ್ರಸ್ಟ್ ವತಿಯಿಂದ ಅನ್ನ ದಾನಪ್ರಸಾದ ಏರ್ಪಡಿಸಲಾಗಿತ್ತು. ಸಮೀಪದ ಶ್ರೀರಾಮೇಶ್ವರ, ಶ್ರೀಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ವೇದಮಾತ ಗಾಯತ್ರಿ ಅನ್ನದಾನ ಸಮಿತಿಯಿಂದ ಊಟದ ವ್ಯವಸ್ಥೆ ಮಾಡಲಾಗಿತ್ತು.

ಬಿಸಿಲ ಬೇಗೆ ನೀಗಿಸಲು ಭಕ್ತಾದಿಗಳಿಗೆ ಅಲ್ಲಲ್ಲಿ ಉಚಿತವಾಗಿ ಪಾನಕ,ನೀರು, ಕೋಸಂಬರಿ ವಿತರಿಸಲಾಯಿತು. ನೀರುಗಂಟೆ ಪಾರ್ವತಮ್ಮ ಕೆಂಚಪ್ಪ ನವರ ಮಕ್ಕಳಾದ ಬಿ.ಎನ್.ಕೆ.ಮೂರ್ತಿ ಮತ್ತು ಬಿ.ಎನ್.ಕೆ.ನಾಗರಾಜ ರಥದ ಅಲಂಕಾರವನ್ನು ಮಾಡಿಸಿದ್ದರು. ಹಳದಮ್ಮ ಬೀದಿಯ ಸುಣ್ಣಗಾರರಾದ ಜಯಲಕ್ಷ್ಮೀ ಮತ್ತು ಕೃಷ್ಣಪ್ಪ ಸಂಜೆ ಪ್ರಸಾದ ಸೇವೆ ನೀಡಿದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiBrahma RathotsavaKannada NewsMalnad NewsSri Lakshminarasimha Swamyದೇವಾಲಯಬ್ರಹ್ಮರಥೋತ್ಸವಭದ್ರಾವತಿಶ್ರೀ ಲಕ್ಷ್ಮೀ ನರಸಿಂಹಸ್ವಾಮಿ
Share196Tweet123Send
Previous Post

ಮೋದಿ ದೇಹ ದಂಡನೆಯ ಧ್ಯಾನ ಮಾಡಿದ್ದು ಯಾವ ಕಾರಣಕ್ಕೆ ಗೊತ್ತಾ?

Next Post

ಕೊನೆಯ ಹಂತದ ಮತದಾನ ಆರಂಭ: ಯೋಗಿ, ನಿತೀಶ್ ಸೇರಿ ಘಟಾನುಘಟಿಗಳಿಂದ ಹಕ್ಕು ಚಲಾವಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೊನೆಯ ಹಂತದ ಮತದಾನ ಆರಂಭ: ಯೋಗಿ, ನಿತೀಶ್ ಸೇರಿ ಘಟಾನುಘಟಿಗಳಿಂದ ಹಕ್ಕು ಚಲಾವಣೆ

ಕೊನೆಯ ಹಂತದ ಮತದಾನ ಆರಂಭ: ಯೋಗಿ, ನಿತೀಶ್ ಸೇರಿ ಘಟಾನುಘಟಿಗಳಿಂದ ಹಕ್ಕು ಚಲಾವಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಯುವತಿಗೆ ಉಪಟಳ | ಅಕ್ಕ ಪಡೆ ಸಿಬ್ಬಂದಿಯಿಂದ ಆರೋಪಿ ವಶಕ್ಕೆ | ಪ್ರಕರಣ ದಾಖಲು

ಯುವತಿಗೆ ಉಪಟಳ | ಅಕ್ಕ ಪಡೆ ಸಿಬ್ಬಂದಿಯಿಂದ ಆರೋಪಿ ವಶಕ್ಕೆ | ಪ್ರಕರಣ ದಾಖಲು

March 4, 2026
​ಹುಬ್ಬಳ್ಳಿ | ಬಂಜಾರ ಕಾಲೋನಿಯಲ್ಲಿ ಸಡಗರದ ಹೋಳಿ ಆಚರಣೆ

​ಹುಬ್ಬಳ್ಳಿ | ಬಂಜಾರ ಕಾಲೋನಿಯಲ್ಲಿ ಸಡಗರದ ಹೋಳಿ ಆಚರಣೆ

March 4, 2026
ಬಿಜೆಪಿ ಮುಖಂಡ ಸತೀಶ್ ಪ್ರಭು ನಿಧನಕ್ಕೆ ಸಂಸದ ಕ್ಯಾ. ಚೌಟ ಸಂತಾಪ

ಬಿಜೆಪಿ ಮುಖಂಡ ಸತೀಶ್ ಪ್ರಭು ನಿಧನಕ್ಕೆ ಸಂಸದ ಕ್ಯಾ. ಚೌಟ ಸಂತಾಪ

March 4, 2026
ಡಿಸೆಂಬರ್ ನಲ್ಲಿ ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ಲೋಕಾರ್ಪಣೆ: ಐಕಳ ಹರೀಶ್ ಶೆಟ್ಟಿ

ಡಿಸೆಂಬರ್ ನಲ್ಲಿ ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ಲೋಕಾರ್ಪಣೆ: ಐಕಳ ಹರೀಶ್ ಶೆಟ್ಟಿ

March 4, 2026
ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರದೊಂದಿಗೆ ಮಾತುಕತೆ: ವಿಜಯೇಂದ್ರ ಭರವಸೆ

ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರದೊಂದಿಗೆ ಮಾತುಕತೆ: ವಿಜಯೇಂದ್ರ ಭರವಸೆ

March 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL