ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಕ್ಷೇತ್ರದಲ್ಲಿ ನಾಲ್ಕು ಬಾರಿ ಶಾಸಕನಾಗಿ ಗೆದ್ದಿದ್ದು, ನನ್ನ ಹಿರಿತನ ನೋಡಿ ಮಂತ್ರಿ ಸ್ಥಾನ ನೀಡಬೇಕು ಎಂದು ಕೈ ಶಾಸಕ ಬಿ.ಕೆ. ಸಂಗಮೇಶ್ MLA Sangamesh ಒತ್ತಾಯಿಸಿದರು.
ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ನನಗೆ ಸಚಿವ ಸ್ಥಾನ ಕೊಡಬೇಕೆಂದು ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನವರಿಗೆ ಮನವಿ ಮಾಡುತ್ತೇನೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಾಲ್ಕನೇ ಬಾರಿ ಜಯಗಳಿಸಿದ್ದೇನೆ. ಕಾಗೋಡು ತಿಮ್ಮಪ್ಪ ನಂತರ ನಾನೊಬ್ಬನೇ ಕಾಂಗ್ರೆಸ್ ಪಕ್ಷದಿಂದ ನಾಲ್ಕು ಬಾರಿ ಜಯಗಳಿಸಿರೋದು. ಇಲ್ಲಿಯವರೆಗೆ ಯಾವುದೇ ಶಾಸಕರಿಗೆ ಸಚಿವ ಸ್ಥಾನ ಸಿಗಲಿಲ್ಲ. ಬಿಜೆಪಿಯಿಂದ ಸಾಕಷ್ಟು ಆಫರ್ ಬಂದರು ಕೂಡ, ಆಪರೇಷನ್ ಕಮಲದ ವೇಳೆ ಕೋಟಿ ಕೋಟಿ ಆಫರ್ ಕೊಟ್ಟು, ಸಚಿವ ಸ್ಥಾನದ ಆಮಿಷ ಒಡ್ಡಿದರೂ ಸಹ ನಾನು ಪಕ್ಷ ಬಿಟ್ಟು ಹೋಗಲಿಲ್ಲ ಎಂದು ತಿಳಿಸಿದರು.
Also read: ಶಿವಮೊಗ್ಗ ಸೇರಿ 13 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಎಷ್ಟು ದಿನ ಭಾರೀ ಮಳೆ ಮುನ್ಸೂಚನೆ
ಸಿದ್ದರಾಮಯ್ಯನವರು ಜನಾಕ್ರೋಶ ಸಮಾವೇಶಕ್ಕೆಂದು ಶಿವಮೊಗ್ಗಕ್ಕೆ ಬಂದಿದ್ದಾಗ ಸಂಗಮೇಶ್ ಅವರನ್ನ ಗೆಲ್ಲಿಸಿ, ಸಚಿವರನ್ನಾಗಿ ಮಾಡುತ್ತೇನೆ ಅಂದಿದ್ರು. ಜನ ಮತ ಹಾಕಿದ್ದಾರೆ. ಒಂದು ವೇಳೆ ಸಚಿವ ಸ್ಥಾನ ಕೊಟ್ಟಿಲ್ಲ ಅಂದ್ರೆ ಏನು ಮಾಡೋದ
ಕ್ಕೆ ಆಗೋದಿಲ್ಲ. ಆದರೆ ನಾನು ಬಿಜೆಪಿಯ ಭದ್ರಕೊಟೆಯಾಗಿರುವ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಗೆದ್ದಿದ್ದೇನೆ. ಜಿಲ್ಲಾವರು ವಿಷಯದಲ್ಲಿ ನಾನು ಹಿರಿಯನಿದ್ದೇನೆ.
ಪ್ರಾಮಾಣಿಕವಾಗಿ ನಾಲ್ಕು ಬಾರಿ ಗೆದ್ದಿದ್ದೇನೆ. ಇದರಿಂದ ನನಗೆ ಸಚಿವ ಸ್ಥಾನದ ಜೊತೆ ಜಿಲ್ಲಾ ಉಸ್ತುವಾರಿ ನೀಡಬೇಕು. ನನಗೆ ಸಚಿವ ಸ್ಥಾನ ಸಿಗದಿದ್ದರೂ ಪಕ್ಷದಲ್ಲೇ ಇರುತ್ತೇನೆ. ನನ್ನ ಹಿರಿತನ ಪರಿಗಣಿಸಿ ಕೊಡುವ ವಿಶ್ವಾಸವಿದೆ. ನನಗೆ ಸಿದ್ದರಾಮ ಯ್ಯ, ಡಿಕೆಶಿ, ಮಲ್ಲಿಕಾರ್ಜುನ ಖರ್ಗೆ ಕೊಡ್ತೇನೆ ಅಂತಾ ಭರವಸೆ ನೀಡಿದ್ದಾರೆ. ನನಗೆ ಸಚಿವ ಸ್ಥಾನ ಕೊಟ್ರೆ ಮುಂಬರುವ ಎಂಪಿ ಚುನಾವಣೆಗೆ ಅನುಕೂಲ ಆಗುತ್ತದೆ ಎಂದರು.
ಮಧು ಬಂಗಾರಪ್ಪ ಸಚಿವ ಸ್ಥಾನ ಕೇಳುತ್ತಿ ರುವ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಅದು ಅವರಿಗೆ ಬಿಟ್ಟ ವಿಚಾರ. ಮಂತ್ರಿ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ. ನಾನು ನಾಲ್ಕು ಬಾರಿ ಕಾಂಗ್ರೆಸ್ ನಿಂದ ಗೆದ್ದಿದ್ದೇನೆ. ಅವರು ಈ ಮುಂಚೆ ಜೆಡಿಎಸ್ ನಿಂದ ಗೆದ್ದಿದ್ದರೆ, ಈ ಬಾರಿ ಕಾಂಗ್ರೆಸ್ ನಿಂದ ಗೆದ್ದಿದ್ದಾರೆ. ಅವರೂ ಯೋಚನೆ ಮಾಡಲಿ. ಮಂತ್ರಿಗಿರಿ ಕೇಳುವು ದರಲ್ಲಿ ತಪ್ಪಿಲ್ಲ. ಆದರೆ ಹಿರಿತನ ಆಧಾರದ ಲ್ಲಿ ನನಗೆ ಮಂತ್ರಿ ಸ್ಥಾನ ನೀಡಬೇಕು. ಹೈ ಕಮಾಂಡ್ ತೀರ್ಮಾನಕ್ಕೆ ನಾನು ಬದ್ದ ಎಂದು ಸ್ಪಷ್ಟಪಡಿಸಿದರು.
ಮೂರು ನಾಲ್ಕು ಬಾರಿ ಗೆದ್ದವರಿಗೆ ಈ ಬಾರಿ ಅವಕಾಶ ನೀಡಬೇಕು. ಸಚಿವ ಸ್ಥಾನ ಗಿಟ್ಟಿಸಿಕೊಳ್ಳುತ್ತಿರುವ ಹಿರಿಯರ ಬದಲು ಮೂರು ನಾಲ್ಕು ಗೆದ್ದು ಬರುತ್ತಿರುವ ಹೊಸಬರಿಗೆ ಮಂತ್ರಿ ಸ್ಥಾನ ನೀಡಬೇಕು. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post