ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಎಲ್ಲ ವಿದ್ಯಾರ್ಥಿಗಳಿಗೂ ಹಾಸ್ಟೆಲ್’ನಲ್ಲಿ ಪ್ರವೇಶಾವಕಾಶ ಕಲ್ಪಿಸುವುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಎಬಿವಿಪಿ ವತಿಯಿಂದ ಬೊಮ್ಮನಕಟ್ಟೆ ಸರ್.ಎಂ.ವಿ. ವಿಜ್ಞಾನ ಕಾಲೇಜಿನ ಮುಂದೆ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಎಬಿವಿಪಿ ಮುಖಂಡರು, ಕೊರೋನಾ ಕಾರಣದಿಂದಾಗಿ ಈ ವರ್ಷದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ನಷ್ಟವಾಗಿದೆ. ಈಗ ರಾಜ್ಯದಾದ್ಯಂತ ಕಾಲೇಜು ತೆರೆದಿದ್ದರೂ, ವಿದ್ಯಾರ್ಥಿಗಳು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಿಂದ ಕಾಲೇಜಿಗೆ ಬಂದು ಹೋಗಲು ಸರಿಯಾದ ಬಸ್ ವ್ಯವಸ್ಥೆಯಿಲ್ಲದೇ ಪರದಾಡುವಂತಾಗಿದೆ ಎಂದು ದೂರಿದ್ದಾರೆ.
ಕಾಲೇಜಿಗೆ ಮತ್ತು ಹಾಸ್ಟೆಲ್’ಗಳಿಗೆ ವಿದ್ಯಾರ್ಥಿಗಳು ಸಂಚರಿಸಲು ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿ, ಎಲ್ಲ ಬೇಡಿಕೆಗಳನ್ನು ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸಿ, ಶೀಘ್ರ ಈಡೇರಿಸಬೇಕು ಎಂದು ಒತ್ತಾಯಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post