ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಭದ್ರಾವತಿ ನಗರದ 42 ವರ್ಷದ ವ್ಯಕ್ತಿಯೊಬ್ಬರು ಕೊರೋನಾಗೆ ಇಂದು ಬಲಿಯಾಗಿದ್ದಾರೆ.
ಸೋಂಕಿತ ವ್ಯಕ್ತಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ಒಂದು ವಾರದಿಂದ ಬೇರೆ ಖಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಗೆ ದಾಖಲಾದ ನಂತರ ಇವರಲ್ಲಿ ಕೊರೋನಾ ಪತ್ತೆಯಾಗಿದೆ ಎಂದು ಹೇಳಲಾಗಿದೆ.
ಚಿಕಿತ್ಸೆ ಫಲಕಾರಿಯಾಗದ ಈ ವ್ಯಕ್ತಿ ಇಂದು ಮೃತನಾಗಿದ್ದಾನೆ.
ಇನ್ನು, ಈ ಆಸ್ಪತ್ರೆಯು 4 ಲಕ್ಷ ಬಿಲ್ ಮಾಡಿದ್ದು, ತತಕ್ಷಣ ಪಾವತಿಸುವಂತೆ ಮೃತನ ಕುಟುಂಬಸ್ಥರಿಗೆ ಒತ್ತಡ ಹೇರಿದ್ದಾರೆ ಎನ್ನಲಾಗಿದೆ. ಇದನ್ನು ವಿರೋಧಿಸಿ ಆಸ್ಪತ್ರೆ ಮುಂದೆ ಸಂಬಂಧಿಗಳು ಪ್ರತಿಭಟನೆ ನಡೆಸಿದ್ದು, ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post