ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಸುಮಾರು 10 ವರ್ಷಗಳ ಹಿಂದಿನ ಕೊಲೆಯತ್ನ ಹಾಗು ಶಾಂತಿಭಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಗೆ ನ್ಯಾಯಾಲಯ 10 ವರ್ಷಗಳ ಶಿಕ್ಷೆ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ.
ತಾಲೂಕಿನ ಕೋಮಾರನಹಳ್ಳಿ ತಾಂಡ ನಿವಾಸಿ ತಾವರಾನಾಯ್ಕ (58) ಶಿಕ್ಷೆಗೊಳಗಾಗಿದ್ದು, ಗ್ರಾಮಾಂತರ ಪೊಲೀಸ್ ಠಾಣೆ ಗುನ್ನೆ ನಂಬರ್ 63/21 ಕಲಂ 504. 507 ಐಪಿಸಿ ದಂಡ ಸಂಹಿತೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.
ಅಂದಿನ ತನಿಖಾಧಿಕಾರಿ ಸಹಾಯಕ ಪೊಲೀಸ್ ಠಾಣಾ ನಿರೀಕ್ಷಕ ಮಂಜೇಶ್ ಹಾಗು ಸಹಾಯಕ ತನಿಖಾಧಿಕಾರಿ ಟಿ.ಪಿ ಮಂಜಪ್ಪರವರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ೪ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಇಂದಿರ ಮೈಲಸ್ವಾಮಿ ಚೆಟ್ಟಿಯಾರ್ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರಿ ಅಭಿಯೋಜಕಿ ಪಿ. ರತ್ನಮ್ಮ ವಾದ ಮಂಡಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post