ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಮಣಿಪಾಲ್ ಆರೋಗ್ಯ ಕಾರ್ಡ್ 2022ರ Manipal Health Card ನೋಂದಣಿ ಪ್ರಾರಂಭವಾಗಿದ್ದು, ಇದನ್ನು ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಉದ್ದೇಶದಿಂದ ಪ್ರಾರಂಭಿಸಲಾಗಿದೆ.
ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ ಎಂಬುದು ಮಣಿಪಾಲ್ ಆರೋಗ್ಯಕಾರ್ಡ್ನ ಧ್ಯೇಯ ವಾಕ್ಯದೊಂದಿಗೆ ಇಂದು ನಗರದಲ್ಲಿ ಇದಕ್ಕೆ ಚಾಲನೆ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಆರಂಭಿಸಿದ ಈ ಯೋಜನೆ ಇಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾವೇರಿ ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಹಾವೇರಿ, ಬಳ್ಳಾರಿ ಸೇರಿದಂತೆ ಕರಾವಳಿ ಕರ್ನಾಟಕದ ಮತ್ತು ಮಧ್ಯ ಕರ್ನಾಟಕದ ಸುಮಾರು 12ಕ್ಕೂ ಹೆಚ್ಚು ಜಿಲ್ಲೆಗಳಿಗೆ ವಿಸ್ತರಣೆ ಅಲ್ಲದೇ ಕೇರಳ, ಗೋವಾದಂತಹ ನೆರೆ ರಾಜ್ಯಗಳಿಗೂ ವಿಸ್ತರಣೆ ಆಗಿದೆ.
ಸದಸ್ಯತ್ವ ಶುಲ್ಕವಾಗಿ ಒಂದು ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ ಯಾರಾದರೂ ಸದಸ್ಯತ್ವವನ್ನು ಪಡೆಯಬಹುದು. ಅವರು ಕಾರ್ಡಿನ ಕೇವಲ ಎರಡು ಅಥವಾ ಮೂರು ಬಳಕೆಗಳಲ್ಲಿ ರಿಯಾಯಿತಿಗಳ ರೂಪದಲ್ಲಿ ಅವರ ಹೂಡಿಕೆಯನ್ನು ಮರಳಿ ಪಡೆಯಬಹುದಾಗಿದೆ.

Also read: ಸಿದ್ಧರಾಮಯ್ಯ, ಡಿ.ಕೆ. ಶಿವಕುಮಾರ್ ರಾಜ್ಯದ ಜನತೆಯ ಕ್ಷಮೆ ಕೇಳಬೇಕು: ಶಾಸಕ ಈಶ್ವರಪ್ಪ ಆಗ್ರಹ
ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರಿಗೆ ಈ ಸೌಲಭ್ಯವಿದೆ:
- ಹೊರ ರೋಗಿ ವಿಭಾಗದಲ್ಲಿ ಒಳ ರೋಗಿ ವಿಭಾಗದಲ್ಲಿ ತಜ್ಞ ಅಥವಾ ಸೂಪರ್ ಸ್ಪೆಷಲಿಸ್ಟ್ ವೈದ್ಯರ ಸಮಾಲೋಚನೆಯಲ್ಲಿ ಶೆ.50 ರಿಯಾಯ್ತಿ
- ಪ್ರಯೋಗಾಲಯ ಪರೀಕ್ಷೆಯಲ್ಲಿ ಶೇ.30 ರಿಯಾಯ್ತಿ
- ಸಿಟಿ, ಎಂಆರ್’ಐ, ಅಲ್ಟಾçಸೌಂಡ್ ಗಳಲ್ಲಿ ಶೇ.20 ರಿಯಾಯ್ತಿ
- ಹೊರರೋಗಿ ವಿಧಾನಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ ಶೇ.20 ರಿಯಾಯ್ತಿ
- ಔಷಧಾಲಯಗಳಲ್ಲಿ ಶೇ.12ರವರೆಗೆ ರಿಯಾಯ್ತಿ *ಸಾಮಾನ್ಯ ವಾರ್ಡಿನಲ್ಲಿ ಒಳರೋಗಿಯಾದಲ್ಲಿ ಉಪಯೋಗವಾಗುವ ವಸ್ತುಗಳನ್ನು ಹೊರತುಪಡಿಸಿ ಶೇ.25 ರಿಯಾಯ್ತಿ
- ಕೋವಿಡ್ ರೋಗಿಗಳಿಗೆ ಜನರಲ್ ವಾರ್ಡ್ನಲ್ಲಿ ರೋಗಿಗಳಿಗೆ ಸರ್ಕಾರ ಅನುಮೋದಿತ ಪ್ಯಾಕೇಜ್ ಮೇಲೆ ಶೇ.10 ರಿಯಾಯ್ತಿ

ಮಣಿಪಾಲ ಆರೋಗ್ಯ ಕಾರ್ಡಿನ ಪ್ರತಿನಿಧಿಯಾಗಬೇಕಾದಲ್ಲಿ ಅನಿಲ್ ನಾಯ್ಕ್ 9740618912 ಸಂಪರ್ಕಿಸಬಹುದಾಗಿದೆ.
2022ರ ನೋಂದಾವಣಿಗಾಗಿ ಅರ್ಜಿಗಳನ್ನು ಅಧಿಕೃತ ಪ್ರತಿನಿಧಿಗಳಾದ ಭದ್ರಾವತಿ: ವಿಪ್ರ ಸೌಹಾರ್ದ: 9739080599, ಎಂ.ಜಿ. ಸುರೇಶ್: 9845681363, ಡಿ. ಶಬರಿವಾಸನ್: 9035616188, ರಾಜೇಶ್: 9448062523, ಮಧು: 9731247134 ಹಾಗೂ ಶಿವಮೊಗ್ಗ: ಎ.ಎನ್. ವಿಜೇಂದ್ರ ರಾವ್: 9448790127ಗೆ ಸಂಪರ್ಕಿಸಬಹುದು.
ಪತ್ರಿಕಾಗೋಷ್ಟಿಯಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕರಾದ ಮೋಹನ್ ಶೆಟ್ಟಿ, ಪ್ರತಿನಿಧಿಯಾದ ಶ್ರೀನಿವಾಸ್ ಭಾಗವತ್ ಇವರೆಲ್ಲರೂ ಉಪಸ್ಥಿತರಿದ್ದರು.










Discussion about this post