No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಪೌರಾಯುಕ್ತ ಮನೋಹರ್‌ ದೇಶದ ಭವಿಷ್ಯದ ರತ್ನ: ಪ್ರೊ. ಸುದೇಶ್ ಅಭಿಪ್ರಾಯ

'ನಾ ಕಂಡ ಪೌರಾಯುಕ್ತರು' ಅಭಿನಂದನಾ ಕೃತಿ ಬಿಡುಗಡೆ ಸಮಾರಂಭ

kalpa News by kalpa News
March 28, 2022
in ಭದ್ರಾವತಿ
0
ಪೌರಾಯುಕ್ತ ಮನೋಹರ್‌ ದೇಶದ ಭವಿಷ್ಯದ ರತ್ನ: ಪ್ರೊ. ಸುದೇಶ್ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ಸರ್ಕಾರಿ ಹುದ್ದೆಯಲ್ಲಿರುವವರು ಜನರ ಮನಸ್ಸಿನಲ್ಲಿ ಉಳಿದುಕೊಳ್ಳುವುದು ಬಹಳ ವಿರಳ. ಪೌರಾಯುಕ್ತರಾಗಿ ಜನರು ಮೆಚ್ಚುವ ರೀತಿಯಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿರುವ ಮನೋಹರ್‌ರವರು ದೇಶದ ಭವಿಷ್ಯದ ರತ್ನವಾಗಿ ಉಳಿದುಕೊಳ್ಳುವ ವಿಶ್ವಾಸವಿದೆ ಎಂದು ಬೆಂಗಳೂರು ವಿಶ್ವ ವಿದ್ಯಾಲಯದ ಕಾನೂನು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಡಾ. ವಿ. ಸುದೇಶ್ ಹೇಳಿದರು.

ಅವರು ಸಿದ್ಧರೂಢ ನಗರದ ಶ್ರೀ ಶಂಕರ ಮಠದ ಶ್ರೀ ಭಾರತೀತೀರ್ಥ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ರಂಗಕರ್ಮಿ-ಕಿರಿತೆರೆ ಕಲಾವಿದ ಅಪರಂಜಿ ಶಿವರಾಜ್‌ರವರ ‘ನಾ ಕಂಡ ಪೌರಾಯುಕ್ತರು’ ಅಭಿನಂದನಾ ಕೃತಿ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಮನೋಹರ್ ಅವರ ವಿದ್ಯಾರ್ಥಿ ಜೀವನವನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ಭದ್ರಾವತಿಯಲ್ಲಿ ಪೌರಾಯುಕ್ತರಾಗಿ ಜನ ಮೆಚ್ಚುವ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿ ಅವರ ಮನಸ್ಸಿನಲ್ಲಿ ಉಳಿದುಕೊಂಡಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.

ಬಹುತೇಕ ಅಧಿಕಾರಿಗಳು ಸರ್ಕಾರಿ ಹುದ್ದೆಯಲ್ಲಿ ವೈಯಕ್ತಿಕ ಲಾಭದ ನಿರೀಕ್ಷೆಯನ್ನು ಹೊಂದಿರುತ್ತಾರೆ. ಆದರೆ ಮನೋಹರ್‌ರವರು ಹುದ್ದೆಯನ್ನು ವೈಯಕ್ತಿಕ ಹಿತಾಸಕ್ತಿಗೆ ಬಳಸಿಕೊಳ್ಳದೆ ಕರ್ತವ್ಯವನ್ನು ಸೇವಾ ಮನೋಭಾವದೊಂದಿಗೆ ನಿರ್ವಹಿಸುತ್ತಿರುವುದು ಅಭಿನಂದನಾರ್ಹವಾಗಿದೆ. ಇವರು ಕೇವಲ ಭದ್ರಾವತಿ ನಗರದ ಜನರಿಗೆ ಮಾತ್ರ ರತ್ನವಾಗಿ ಉಳಿದಿಲ್ಲ ದೇಶದ ರತ್ನವಾಗಿ ಉಳಿದುಕೊಂಡಿದ್ದಾರೆ ಎಂದರು.

ಚಲನಚಿತ್ರ ನಟಿ, ಮಿಸ್ ಸುಪ್ರ ನ್ಯಾಷನಲ್ 2014ರ ವಿಜೇತೆ ಆಶಾ ಭಟ್ ಮಾತನಾಡಿ, ನಮ್ಮೆಲ್ಲರ ಸಾಧನೆಗೆ ನಮ್ಮೂರಿನ ಕೊಡುಗೆ ಅಪಾರವಾಗಿದೆ. ಇಲ್ಲಿನ ಜನರು ಕಲಾವಿದರು ಸೇರಿದಂತೆ ಎಲ್ಲಾ ಕ್ಷೇತ್ರದವರಿಗೂ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದಾರೆ. ಉತ್ತಮ ಅಧಿಕಾರಿಯಾಗಿರುವ ಮನೋಹರ್‌ರವರು ನಮ್ಮೂರಿನಲ್ಲಿ ಸೇವೆ ಸಲ್ಲಿಸಿರುವುದು ನಮ್ಮೆಲ್ಲರ ಹೆಮ್ಮೆಯ ವಿಚಾರವಾಗಿದೆ ಎಂದರು.

ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಜಿ. ಧನಂಜಯ ಮಾತನಾಡಿ, ಪ್ರತಿಯೊಬ್ಬರು ತಮ್ಮ ಬದುಕಿನಲ್ಲಿ ಉತ್ತಮ ಗುಣಗಳನ್ನು ಮೈಗೂಡಿಸಿಕೊಂಡು ಮುನ್ನಡೆದಾಗ ಮಾತ್ರ ಯಾವುದೇ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ. ಆ ಮೂಲಕ ಜನರ ಮನಸ್ಸಿನಲ್ಲಿ ಉಳಿದುಕೊಳ್ಳಬಹುದಾಗಿದೆ. ಈ ನಿಟ್ಟಿನಲ್ಲಿ ಮನೋಹರ್ ಸಹ ಒಬ್ಬರಾಗಿದ್ದು, ಸರ್ಕಾರಿ ಅಧಿಕಾರಿಯಾಗಿ ಕರ್ತವ್ಯದಲ್ಲಿ ನಿಷ್ಠೆ ತೋರಿಸುವ ಮೂಲಕ ಎಲ್ಲರ ಮನಸ್ಸಿನಲ್ಲಿ ಉಳಿದುಕೊಂಡಿದ್ದಾರೆ ಎಂದರು.

ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎನ್. ಶ್ರೀಹರ್ಷ ಮಾತನಾಡಿ, ಮನೋಹರ್ ಕರ್ತವ್ಯಕ್ಕೆ ಹೆಚ್ಚಿನ ಮಾನ್ಯತೆ ನೀಡಿದವರು. ಕೆಳವರ್ಗದ ಜನರ ನೋವುಗಳನ್ನು ಅರಿತುಕೊಂಡವರು. ಅವರೊಂದಿಗೆ ನಾನು ಸಹ ಒಬ್ಬರು ಎಂಬಂತೆ ಕಾಯಕದಲ್ಲಿ ತೊಡಗಿಸಿಕೊಂಡವರು. ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದವರು. ಇಂತಹ ಅಧಿಕಾರಿಗಳು ಅಪರೂಪ ಎಂದರು.

Also read: ಪುನೀತ್ ಅವರನ್ನು ಮರಳಿ ಕಳುಹಿಸು ಪ್ರಭುವೇ: ದೇವರ ಹುಂಡಿಯಲ್ಲಿ ದೊರೆತ ಭಾವನಾತ್ಮಕ ಚೀಟಿ

ರಂಗಕರ್ಮಿ-ಕಿರಿತೆರೆ ಕಲಾವಿದ ಅಪರಂಜಿ ಶಿವರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ, ‘ನಾ ಕಂಡ ಪೌರಾಯುಕ್ತರು’ ಕೃತಿ ರಚಿಸಲು ಉಂಟಾದ ಪ್ರೇರಣೆಗಳು, ಆಶಯಗಳನ್ನು ವಿವರಿಸಿದರು.

ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಮಾಜಿ ಅಧ್ಯಕ್ಷ ಬಿ.ಕೆ. ಮೋಹನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಚಲನಚಿತ್ರ ನಟ, ನಿರ್ದೇಶಕ, ಜಾದೂ ಮಾಂತ್ರಿಕ ಎಂ.ಡಿ. ಕೌಡಿಕ್ ವಿಶಿಷ್ಟವಾಗಿ ಜಾದೂ ಮೂಲಕ ಉದ್ಘಾಟನೆ ನೆರವೇರಿಸಿಕೊಟ್ಟರು. ಶಾಶ್ವತಿ ಮಹಿಳಾ ಸಮಾಜದ ಅಧ್ಯಕ್ಷೆ ರೂಪ ರಾವ್ ಸ್ವಾಗತಿಸಿದರು. ಮಮತಾ ಬಿ. ನವೀನ್ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsNewsinKannadaNewsKannadaShimogaShivamoggaShivamogga Newsಉಕ್ಕಿನನಗರಿಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪುನೀತ್ ಅವರನ್ನು ಮರಳಿ ಕಳುಹಿಸು ಪ್ರಭುವೇ: ದೇವರ ಹುಂಡಿಯಲ್ಲಿ ದೊರೆತ ಭಾವನಾತ್ಮಕ ಚೀಟಿ

Next Post

ಕೃತಕ ಅಭಾವ ಸೃಷ್ಠಿಸುತ್ತಿವೆಯೇ ಪೆಟ್ರೋಲಿಯಂ ಕಂಪೆನಿಗಳು? ವಿತರಕರ-ಸಾರ್ವಜನಿಕರ ಹಿತಕಾಯುವುದೇ ಸರ್ಕಾರ?

kalpa News

kalpa News

Next Post
ಕೃತಕ ಅಭಾವ ಸೃಷ್ಠಿಸುತ್ತಿವೆಯೇ ಪೆಟ್ರೋಲಿಯಂ ಕಂಪೆನಿಗಳು? ವಿತರಕರ-ಸಾರ್ವಜನಿಕರ ಹಿತಕಾಯುವುದೇ ಸರ್ಕಾರ?

ಕೃತಕ ಅಭಾವ ಸೃಷ್ಠಿಸುತ್ತಿವೆಯೇ ಪೆಟ್ರೋಲಿಯಂ ಕಂಪೆನಿಗಳು? ವಿತರಕರ-ಸಾರ್ವಜನಿಕರ ಹಿತಕಾಯುವುದೇ ಸರ್ಕಾರ?

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL