ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ವಿಧಾನಸಭಾ ಕಲಾಪದಲ್ಲಿಂದು ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ್ ಅವರು ಅಂಗಿ ಬಿಚ್ಚಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಒಂದು ರಾಷ್ಟ್ರ, ಒಂದು ಚುನಾವಣೆ ವಿಚಾರ ಪ್ರಸ್ತಾಪಿಸಿ ಚರ್ಚೆಗೆ ಅವಕಾಶ ನೀಡಿದರು. ಇದಕ್ಕೆ ಕಾಂಗ್ರೆಸ್ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿ, ಇದು ಆರ್’ಎಸ್’ಎಸ್ ಅಜೆಂಡಾ ಇಂತಹ ವಿಚಾರದ ಚರ್ಚೆ ಬೇಡ ಎಂದು ಗದ್ದಲ ಎಬ್ಬಿಸಿದರು.
ಈ ವೇಳೆ ಪ್ರತಿಪಕ್ಷಗಳ ವಿರೋಧದ ನಡುವೆಯೂ ಒಂದು ದೇಶ, ಒಂದು ಚುನಾವಣೆ ವಿಚಾರ ಚರ್ಚೆಗೆ ಮುಂದಾಗ ಸ್ಪೀಕರ್ ನಡೆ ವಿರೋಧಿಸಿ ಕಾಂಗ್ರೆಸ್ ಸದಸ್ಯರು ಸದನದ ಬಾವಿಗೆ ಇಳಿದು ಪ್ರತಿಭಟಿಸಿದರು.
ಈ ವೇಳೆ ಶಾಸಕ ಸಂಗಮೇಶ್ವರ್ ಅವರು ಅಂಗಿ ಬಿಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಸಂಗಮೇಶ್ವರ್ ಅವರ ಈ ನಡೆಗೆ ಕೆಂಡಾಮಂಡಲರಾದ ಸ್ಪೀಕರ್ ಕಾಗೇರಿ ಅವರು, ಸದನದಲ್ಲಿ ಇಂತಹ ವರ್ತನೆ ಶೋಭೆಯಲ್ಲ. ಅಶಿಸ್ತಿನಿಂದ ನಡೆದುಕೊಂಡರೆ ಹೊರಗೆ ಹಾಕಬೇಕಾಗುತ್ತದೆ. ಸದನದಲ್ಲಿ ಗೌರವದಿಂದ ನಡೆದುಕೊಳ್ಳಿ, ಕ್ಷೇತ್ರದ ಜನತೆಗೆ ಅಗೌರವ ತೋರಬೇಡಿ. ವಿರೋಧವಿದ್ದರೆ ಗೌರವಯುತವಾಗಿ ಪ್ರತಿಭಟಿಸಿ. ಆದರೆ, ಸದನದ ಘನತೆ ಹಾಳು ಮಾಡುವ ಇಂತಹ ಕೆಲಸ ಮಾಡಬೇಡಿ ಎಂದು ಚಾಟಿ ಬೀಸಿದರು.
ಆನಂತರ ಡಿ.ಕೆ. ಶಿವಕುಮಾರ್ ಅವರು ಸೂಚನೆಯ ಮೇರೆಗೆ ಸಂಗಮೇಶ್ವರ್ ಅವರು ಅಂಗಿ ಹಾಕಿಕೊಂಡರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news










Discussion about this post